ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಗಾಜನೂರು ಅಣೆಕಟ್ಟೆಗೆ ಅಪಾರ ಪ್ರಮಾಣದಲ್ಲಿ ಒಳಹರಿದಿದ್ದು, 46,257 ಕ್ಯೂಸೆಕ್ಸ್ ನೀರನ್ನು ತುಂಗಾ ನದಿಗೆ ಹರಿಸಲಾಗುತ್ತಿದೆ.
ತುಂಗಾ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಗಂಟೆಯಿಂದ ಗಂಟೆಗೆ ನೀರಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಹೀಗಾಗಿ, ಅಣೆಕಟ್ಟೆಯಿಂದ 46,257 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ತುಂಗೆ ಮೈದುಂಬಿ ಹರಿಯುತ್ತಿದ್ದಾಳೆ.
ನದಿಯಲ್ಲಿ ನೀರು ಏರಿಕೆಯಾದ ಪರಿಣಾಮ ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಮುಳುಗುವ ಹಂತಕ್ಕೆ ಬಂದು ತಲುಪಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















