No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಳೆಯಿಂದ ಮನೆ ಕಳೆದುಕೊಂಡವರಿಗೆ ಅಂದೇ 5 ಲಕ್ಷ ರೂ. ಬಿಡುಗಡೆ: ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 7, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಳೆಯಿಂದ ಮನೆ ಹಾನಿಗೊಳಗಾದ ಸಂತ್ರಸ್ಥ ಕುಟುಂಬಗಳಿಗೆ ತುರ್ತು ಕ್ರಮಕ್ಕಾಗಿ ರೂ.10,000/-ಗಳ ಪರಿಹಾರಧನವನ್ನು ಕೂಡಲೇ ನೀಡುವಂತೆ ಹಾಗೂ ಭಾಗಶಃ ಹಾಗೂ ಪೂರ್ಣ ಪ್ರಮಾಣದಲ್ಲಿ ಮನೆ ಹಾನಿಯಾಗಿದ್ದಲ್ಲಿ ಅವರಿಗೆ ಮನೆಯನ್ನು ಪುನರ್ ನಿರ್ಮಿಸಿಕೊಳ್ಳಲು ಸರ್ಕಾರ ನೀಡುವ 5ಲಕ್ಷ ರೂ.ಗಳ ಬಾಬ್ತು ಒಂದು ಲಕ್ಷ ರೂ.ಗಳನ್ನು ಅಂದೇ ಬಿಡುಗಡೆಗೊಳಿಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಮಳೆ ಹಾನಿ ಹಾಗೂ ತುರ್ತು ಪರಿಹಾರ ಕ್ರಮಗಳಿಗಾಗಿ ಜಿಲ್ಲಾಡಳಿತದ ವತಿಯಿಂದ ಕೈಗೊಂಡ ಹಾಗೂ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಬಾದಿತ ಎಲ್ಲಾ ಕುಟುಂಬಗಳಿಗೆ ತಕ್ಷಣದ ಪರಿಹಾರ ನೀಡುವುದರ ಜೊತೆಗೆ ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ, ಸೂಕ್ತ ವಸತಿ ಕಲ್ಪಿಸಬೇಕು. ಕಳೆದ ಸಾಲಿನಲ್ಲಿ ಇಂತಹ ಸಂದಿಗ್ಧ ಸಂದರ್ಭದಲ್ಲಿ ಆರಂಭಿಸಲಾಗಿದ್ದ ನೆರೆ ಪರಿಹಾರ ಕೇಂದ್ರಗಳನ್ನು ಅಲ್ಲಿಯೇ ಹಾಗೂ ಅಗತ್ಯವಿರುವಲ್ಲಿ ಸ್ಥಾಪಿಸಲು ಸಿದ್ಧರಾಗಿರುವಂತೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸಂತ್ರಸ್ಥರಿಗೆ ನೀಡುವ ಪರಿಹಾರಧನಕ್ಕೆ ವಿಳಂಬ ಆಗದಂತೆ ಹಾಗೂ ಯಾರೊಬ್ಬ ಸಂತ್ರಸ್ಥರು ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ನದಿದಂಡೆಗಳ ನಿವಾಸಿಗಳು ನದಿದಂಡೆಗೆ ತೆರಳದಂತೆ ಅಲ್ಲಿನ ನಿವಾಸಿಗಳಿಗೆ ಸೂಚನೆ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿರುವಂತೆ ಅವರು ಸೂಚಿಸಿದರು.


ಕಳೆದ ಸಾಲಿನಲ್ಲಿ ವಿವಿಧ ಕಾರಣಗಳಿಂದಾಗಿ ಕೈಬಿಟ್ಟು ಹೋಗಿದ್ದ ಸಂತ್ರಸ್ಥರಿಗೂ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಅವರು, ತೀರ್ಥಹಳ್ಳಿ ತಾಲೂಕಿನ ಹೆಗಲತ್ತಿಯಲ್ಲಿ ಗುಡ್ಡ ಕುಸಿತದಿಂದ ಹಾನಿಗೊಳಗಾಗಿದ್ದ ಪ್ರದೇಶಕ್ಕೆ ಭೇಟಿ ನೀಡಿ, ಸಂತ್ರಸ್ಥರೊಂದಿಗೆ ಚರ್ಚಿಸಿ, ಅವರ ನಿರೀಕ್ಷೆಯಂತೆ ಪರಿಹಾರ ಕಾರ್ಯ ಕೈಗೊಳ್ಳಬಹುದಾದ ಸಾದ್ಯತೆಗಳ ಬಗ್ಗೆ ಪರಿಶೀಲಿಸುವಂತೆ ಅವರು ಸೂಚಿಸಿದರು.

ಕಳೆದ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾದ ಶಾಲೆಗಳ ದುರಸ್ತಿಗೆ ಬಿಡುಗಡೆಯಾಗಿದ್ದ 20ಲಕ್ಷ ರೂ.ಗಳ ಅನುದಾನ ಬಳಕೆಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಅಲ್ಲದೇ ಪೂರ್ಣಗೊಳಿಸಿದ ಕಾಮಗಾರಿ ಸರಿಯಾಗಿರುವ ಬಗ್ಗೆಯೂ ಪರಿಶೀಲಿಸುವಂತೆ ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೆಶಕರಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನ ಹಾಗೂ ಕಟ್ಟಡ ನಿರ್ಮಾಣಗೊಂಡಿರುವ ಕುರಿತು 3-4ದಿನಗಳಲ್ಲಿ ವಿವರವಾದ ಮಾಹಿತಿ ನೀಡುವಂತೆ ಮಹಿಳಾ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಹಲವೆಡೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಮಳೆಯಿಂದ ಹಾನಿಗೊಳಗಾಗಿದ್ದು, ಅವುಗಳ ದುರಸ್ತಿ ಬಗ್ಗೆಯೂ ಗಮನಹರಿಸಬೇಕು. ಶಿವಮೊಗ್ಗ-ಆಗುಂಬೆ ಮಾರ್ಗದಲ್ಲಿ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಮಳೆಯಿಂದ ಧರೆಗುರುಳಿದ ಮರಗಳಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಹಾಗೂ ಪುನರ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಹಾಳಾಗಿರುವ ಟ್ರಾನ್ಸಫರ್ಮರ್‌ಗಳ ಬದಲಾವಣೆ ಮಾಡುವಲ್ಲಿ ಕೈಗೊಂಡ ಕ್ರಮಗಳ ಕುರಿತು ಮೆಸ್ಕಾಂನ ಕಾರ್ಯಪಾಲಕ ಅಭಿಯಂತರರಿಂದ ಸಚಿವರು ಮಾಹಿತಿ ಪಡೆದ ಅವರು ಅರಣ್ಯ ಇಲಾಖೆ ಹಾಗೂ ಮೆಸ್ಕಾಂನ ಅಧಿಕಾರಿಗಳೊಂದಿಗೆ ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ, ಮೇಯರ್ ಸುವರ್ಣಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: Heavy RainK S EshwarappaKannada News WebsiteLatest News KannadaLocal NewsMalnad NewsShivamogga NewsTunga Riverಕೆ.ಎಸ್. ಈಶ್ವರಪ್ಪಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತುಂಗಾ ನದಿಯ ಅಬ್ಬರಕ್ಕೆ ಹೆದರಿ ಒಂದೇ ಮರದಲ್ಲಿ ಆಶ್ರಯ ಪಡೆದ 15ಕ್ಕೂ ಅಧಿಕ ಹಾವುಗಳ ರಕ್ಷಣೆ

Next Post

ಭೋರ್ಗರೆಯುತ್ತಿದೆ ತುಂಗಾ ನದಿ: ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಯ್ತು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲೆಯಲ್ಲಿ ಭರ್ಜರಿ ಮಳೆ: ಗುರುವಾರ ಮುಂಜಾನೆ ಗಾಜನೂರು ಡ್ಯಾಂನಿಂದ 56 ಕ್ಯೂಸೆಕ್ಸ್‌ ನೀರು ಹೊರಕ್ಕೆ

ಭೋರ್ಗರೆಯುತ್ತಿದೆ ತುಂಗಾ ನದಿ: ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಯ್ತು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

June 20, 2026
Crowd in Shivamogga Taluk Office

ಶಿವಮೊಗ್ಗ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಜನವೋ… ಜನ..! ಪ್ರಮಾಣಪತ್ರಕ್ಕಾಗಿ ಜನರ ಪರದಾಟ

June 20, 2026
Indian Railway Special Trains

ಮೈಸೂರು – ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

June 20, 2026
ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

June 20, 2026
Youth Brutally Murdered Inside House in Shivamogga Village

ಶಿವಮೊಗ್ಗ | ಸುತ್ತುಕೋಟೆ ಗ್ರಾಮದ ಮನೆಯಲ್ಲೇ ಯುವಕನ ಭೀಕರ ಹತ್ಯೆ

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL