ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದಿದ್ದ ಇ-ಚಲನ್ ದಂಡದ ಮೊತ್ತಕ್ಕೆ ರಾಜ್ಯ ಸರ್ಕಾರ ಘೋಷಿಸಿದ್ದ ಶೇ.50 ರಿಯಾಯಿತಿ ಯೋಜನೆಗೆ ಶಿವಮೊಗ್ಗದಲ್ಲಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವಿಶೇಷ ಅಭಿಯಾನದ ಅವಧಿಯಲ್ಲಿ 30 ಸಾವಿರಕ್ಕೂ ಹೆಚ್ಚು ಇ-ಚಲನ್ ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹1.27 ಕೋಟಿಗೂ ಅಧಿಕ ದಂಡದ ಮೊತ್ತ ಸಂಗ್ರಹವಾಗಿದೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದಿದ್ದ ಇ-ಚಲನ್ ದಂಡಕ್ಕೆ ರಾಜ್ಯ ಸರ್ಕಾರದಿಂದ ಶೇ.50 ರಿಯಾಯಿತಿ ನೀಡಲಾಗಿತ್ತು. ಈ ವಿಶೇಷ ರಿಯಾಯಿತಿ ಯೋಜನೆ ಜೂನ್ 21ರಿಂದ ಜುಲೈ 10ರವರೆಗೆ ಜಾರಿಯಲ್ಲಿತ್ತು.

Also read: ಜು.12ರಂದು ವಿದುಷಿ ಸುಷ್ಮಾ ಶಿಷ್ಯೆಯರ ಆನಂದ ನೂಪುರಮ್ ಕಾರ್ಯಕ್ರಮ
ಈ ಅವಧಿಯಲ್ಲಿ ಶಿವಮೊಗ್ಗ ನಗರ ಸಂಚಾರ ಪೊಲೀಸರು ಸಾರ್ವಜನಿಕರಿಗೆ ರಿಯಾಯಿತಿ ಯೋಜನೆಯ ಸದುಪಯೋಗ ಪಡೆಯುವಂತೆ ಮನವಿ ಮಾಡಿದ್ದು, ಅದಕ್ಕೆ ಉತ್ತಮ ಸ್ಪಂದನೆ ದೊರೆತಿದೆ. ಅಭಿಯಾನದ ವೇಳೆ ಒಟ್ಟು 30,218 ಇ-ಚಲನ್ ಪ್ರಕರಣಗಳು ಇತ್ಯರ್ಥಗೊಂಡಿದ್ದು, 1,27,95,250ರೂ. ದಂಡದ ಮೊತ್ತ ಸಂಗ್ರಹಿಸಲಾಗಿದೆ.
ಈ ವಿಶೇಷ ಅಭಿಯಾನಕ್ಕೆ ಸ್ಪಂದಿಸಿ ಸಹಕರಿಸಿದ ಸಾರ್ವಜನಿಕರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ. ಮುಂದೆಯೂ ಎಲ್ಲಾ ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸುರಕ್ಷಿತ ಹಾಗೂ ಶಿಸ್ತುಬದ್ಧ ಸಂಚಾರ ವ್ಯವಸ್ಥೆ ನಿರ್ಮಿಸಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಇಲಾಖೆ ಮನವಿ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









