ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಒಳಹರಿವು ಹೆಚ್ಚಾಗಿದ್ದು, ಭದ್ರಾ ಜಲಾಶಯದಿಂದ 56,104.29 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹೊಳೆಹೊನ್ನೂರು ಗೇಜ್ ಮಾಹಿತಿಯಂತೆ ರಾತ್ರಿ 10ರ ವೇಳೆಗೆ ಜಲಾಶಯದ ಒಳ ಹರಿವು 76,000 ಕ್ಯೂಸೆಕ್ಸ್ ಹೊಂದಿದ್ದು, 183.8 ಅಡಿ ಭರ್ತಿಯಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಜಲಾಶಯದ 4 ಕ್ರಸ್ಟ್ ಗೇಟ್’ಗಳನ್ನು 10 ಅಡಿ ತೆರೆದು 56,104.29 ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ ಎಂದು ತಿಳಿದು ಬಂದಿದೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post