ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಸಿಆರ್’ಪಿಫ್’ನ #CRPF ಆರು ತಂಡಗಳು ಜಿಲ್ಲೆಗೆ ಆಗಮಿಸಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 36 ಕಡೆ ಚೆಕ್’ಪೋಸ್ಟ್’ಗಳನ್ನು #CheckPost ಸ್ಥಾಪಿಸಿದ್ದು, 7 ಚೆಕ್’ಪೋಸ್ಟ್ ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ ಎಂದರು.

ಕಳೆದ ತಿಂಗಳಿಂದ ಜಿಲ್ಲೆಯಲ್ಲಿ 55 ಜನರಿಗೆ ಗಡೀಪಾರು ಆದೇಶ ಮತ್ತು ಕಳೆದ 5-6 ತಿಂಗಳಿAದ 6 ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಚುನಾವಣೆಗೆ ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ವಹಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post