ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಹಾಮಾರಿ ಕೋವಿಡ್19 ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದಿದ್ದು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಕೋವಿಡ್19 ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆಗೆ ಇಲಾಖೆಯು ಸಿದ್ಧತೆ ನಡೆಸುತ್ತಿದೆ ಎಂದಿದ್ದಾರೆ.
ಇನು, ಸಾರ್ವಜನಿಕರು ದಯಮಾಡಿ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093

















