ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮದ್ಯ ಸಿಗದೇ ಪರದಾಡುತ್ತಿರುವ ಮದ್ಯವ್ಯಸನಿಗಳು ಹೊಸಮನೆಯ ವೈನ್ ಸ್ಟೋರ್’ಗೆ ಕನ್ನ ಹಾಕಿದ್ದು, ಸುಮಾರು 70 ಸಾವಿರ ರೂ. ಮೌಲ್ಯದ ಮದ್ಯ ಕದ್ದಿದ್ದಾರೆ.
ಹೊಸಮನೆ ಮುಖ್ಯರಸ್ತೆಯಲ್ಲಿರುವ ಧನುಶ್ರೀ ವೈನ್ಸ್ ಸ್ಟೋರ್’ಗೆ ಹಿಂದಿನ ಗೋಡೆಯಿಂದ ಕನ್ನ ಹಾಕಿರುವ ದುಷ್ಕರ್ಮಿಗಳು ಒಳಗೆ ಸಂಗ್ರಹಿಸಿದ್ದ 70 ಕ್ಕೂ ಅಧಿಕ ಮೌಲ್ಯದ ಮದ್ಯ ಕದ್ದಿದ್ದಾರೆ.
ಘಟನೆ ಹಿನ್ನಲೆಯಲ್ಲಿ ಪೊಲೀಸರು ಹಾಗೂ ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Get in Touch With Us info@kalpa.news Whatsapp: 9481252093
Discussion about this post