ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 765 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 737 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1170 ನೆಗೆಟಿವ್ ಹಾಗೂ 765 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು 903 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆಯಾಗಿ ಇಂದು 14 ಮಂದಿ ಸಾವಿಗೀಡಾಗಿದ್ದಾರೆ.
ಇಂದು 604 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ 467 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 557 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 4527 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.
ತಾಲೂಕುವಾರು ವಿವರ:
ಶಿವಮೊಗ್ಗ: 222
ಭದ್ರಾವತಿ: 207
ಶಿಕಾರಿಪುರ: 59
ತೀರ್ಥಹಳ್ಳಿ: 22
ಸೊರಬ: 50
ಸಾಗರ: 118
ಹೊಸನಗರ: 61
ಇತರೆ ಜಿಲ್ಲೆ: 26
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















