ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 793 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 3366 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 2593 ನೆಗೆಟಿವ್ ಹಾಗೂ 793 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಇಂದು 526 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆಯಾಗಿ ಇಂದು 12 ಮಂದಿ ಸಾವಿಗೀಡಾಗಿದ್ದಾರೆ.
ಇಂದು 600 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ 1391 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 1519 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 2237 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.ತಾಲೂಕುವಾರು ವಿವರ:
ಶಿವಮೊಗ್ಗ: 285
ಭದ್ರಾವತಿ: 150
ಶಿಕಾರಿಪುರ: 87
ತೀರ್ಥಹಳ್ಳಿ: 49
ಸೊರಬ:51
ಸಾಗರ: 69
ಹೊಸನಗರ: 76
ಇತರೆ ಜಿಲ್ಲೆ: 26
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post