ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನಾದ್ಯಂತ ಇಂದು ಗರ್ಭಿಣಿ ಸೇರಿ 8 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಉಜ್ಜಿನೀಪುರದ 55 ವರ್ಷದ ಪುರುಷ, 48 ವರ್ಷದ ಮಹಿಳೆ, 30 ವರ್ಷದ ಪುರುಷನಲ್ಲಿ ಪಾಸಿಟಿವ್ ಬಂದಿದ್ದು, ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ವರದಿಯಾಗಿದೆ.
ಇನ್ನು, ಕೆಎಸ್’ಆರ್’ಟಿಸಿಯಲ್ಲಿ ಕಂಡಕ್ಟರ್ ಆಗಿರುವ 50 ವರ್ಷದ ಪುರುಷ, ಹೊಸ ಬುಳ್ಳಾಪುರ 30 ವರ್ಷದ ಗರ್ಭಿಣಿಯಲ್ಲಿ ಸೋಂಕು ದೃಢಪಟ್ಟಿದೆ.
ಇನ್ನು, ಹೊಳೆಹೊನ್ನೂರು ವ್ಯಾಪ್ತಿಯ ಎಮ್ಮೆಹಟ್ಟಿಯ 40 ವರ್ಷದ ಪುರುಷ ಹಾಗೂ ವಿದ್ಯಾನಗರದ 17 ವರ್ಷದ ಯುವಕ ಹಾಗೂ ಸಿರಿಯೂರು ವೀರಾಪುರದ 21 ವರ್ಷದ ಯುವಕನಲ್ಲಿ ಪಾಸಿಟಿವ್ ಬಂದಿದೆ.
ಸೋಂಕಿತರ ನಿವಾಸದ ಸ್ಥಳಗಳಿಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ನಗರಸಭೆ ಆಯುಕ್ತ ಮನೋಹರ್, ಆರೋಗ್ಯ ಹಿರಿಯ ನಿರೀಕ್ಷಕ ನೀಲೇಶ್ ರಾಜ್ ಮುಂತಾದವರು ಭೇಟಿ ನೀಡಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post