ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ರಾತ್ರಿ 9ರಿಂದ ಮುಂಜಾನೆ 5ರವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಪ್ರಮುಖವಾಗಿ ಕೇರಳ, ಮಹಾರಾಷ್ಟ್ರ ಸೇರಿದಂತೆ ಸೋಂಕು ಹೆಚ್ಚಿರುವ ರಾಜ್ಯಗಳೊಂದಿಗೆ ಗಡಿ ಹೊಂದಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂದಿದ್ದಾರೆ.
ಕೋವಿಡ್ ಟಾಸ್ಕ್ ಪೋರ್ಸ್ ಒಂದೆರಡು ದಿನದಲ್ಲಿ ರಚನೆಯಾಗಲಿದ್ದು, ಸೋಂಕು ಹರಡದಂತೆ ತಡೆಯಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ತಜ್ಞರು ಹಾಗೂ ಕೋವಿಡ್ ತಾಂತ್ರಿಕ ಸಮಿತಿ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಯಿತು. ಕೊರೋನಾ ಪಾಸಿಟಿವಿಟಿ ರೇಟ್ ನೋಡಿಕೊಂಡು ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Discussion about this post