ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು 96 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತೆತಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1823ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮೂವರು ಸಾವನ್ನಪ್ಪಿದ್ದರೆ, 78 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿಯೇ 62 ಪ್ರಕರಣಗಳು ಪತ್ತೆಯಾಗಿವೆ.
ಇನ್ನು, ಈವರೆಗೂ 362 ಕಂಟೈನ್ಮೆಂಟ್ ಝೋನ್ೞಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್ೞಗಳ ಸಂಖ್ಯೆ 97 ಆಗಿದೆ. ಇಂದು ಒಟ್ಟು 537 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 491 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 786 ಆಗಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 62 ಭದ್ರಾವತಿ: 15 ಸಾಗರ: 3 ಸೊರಬ: 3 ಶಿಕಾರಿಪುರ: 9 ಹೊಸನಗರ: 1 ಇತರೆ ಜಿಲ್ಲೆ: 3
Get In Touch With Us info@kalpa.news Whatsapp: 9481252093
Discussion about this post