ಶಿಕಾರಿಪುರ: 2018-19ನೆಯ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಮದ್ವತಿ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜು ಶೇ.99ರಷ್ಟು ಫಲಿತಾಂಶ ಗಳಿಸುವ ಮೂಲಕ ಜಿಲ್ಲೆಯಲ್ಲೇ ಹೆಮ್ಮೆಯ ಸಂಸ್ಥೆಯಾಗಿ ಹೊರಹೊಮ್ಮಿದೆ.
ಈ ಬಾರಿ ಪರೀಕ್ಷೆ ತೆಗೆದುಕೊಂಡ 72 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 16 ಡಿಸ್ಟಿಂಕ್ಷನ್, 47 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.
ಬಿ.ಎ. ಪ್ರಿಯಾ 600 ಅಂಕಗಳಿಗೆ 585 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು, ಲೆಕ್ಕ ಶಾಸ್ತ್ರದಲ್ಲಿ 100, ಅರ್ಥಶಾಸ್ತ್ರದಲ್ಲಿ 100, ಸಂಖ್ಯಾಶಾಸ್ತ್ರದಲ್ಲಿ 100 ಅಂಕ ಗಳಿಸಿದ್ದಾರೆ.
ಜ್ಞಾನ ಭಾಗದಲ್ಲಿ ಶೇ.94ರಷ್ಟು ಪಡೆದಿದ್ದು, ಪರೀಕ್ಷೆ ತೆಗೆದುಕೊಂಡ 164 ವಿದ್ಯಾರ್ಥಿಗಳಲ್ಲಿ 153 ಉತ್ತಿರ್ಣರಾಗಿದ್ದಾರೆ. 34 ಡಿಸ್ಟಿಂಕ್ಷನ್, 88 ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದು, ಜೆ.ಎಚ್. ದಿವ್ಯಾ 600 ಅಂಕಗಳಿಗೆ 572 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)
Discussion about this post