ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ಭದ್ರಾವತಿ ಹೆಲಿಪ್ಯಾಡ್ ಬೊಮ್ಮನಕಟ್ಟೆ ಹತ್ತಿರ ಮಾಧ್ಯಮದವರೊಂದಿಗೆ ಮಾತನಾಡಿದರು.
ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಯಿಸಿ, ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿಯಾವುದೇ ಗೊಂದಲವಿಲ್ಲ ಎಂದರು.
Also read: ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















