ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ರಾಜಕೀಯ ಪ್ರೇರಿತವಾಗಿ ತೆಗೆದುಹಾಕಲಾಗುತ್ತಿದೆ ಎಂಬ ಉಹಾಪೋಹಗಳನ್ನು ಮಾದ್ಯಮದಲ್ಲಿ ಭಿತ್ತರಿಸಲಾಗಿದೆ. ಹಾಗೂ ದೆಹಲಿ ಮೂಲದ ಎ.ಎಸ್.ಆರ್ ಕಂಪನಿಯು ಮತದಾರರ ಗೌಪ್ಯ ಮಾಹಿತಿ ಸಂಗ್ರಹಿಸುತ್ತಿದ್ದು, ಇದರಿಂದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲಾಗುತ್ತಿದೆ ಅಂತಾ ಆಪಾದಿಸಲಾಗಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ DC Gurudutta Hegade ಅವರು ತಿಳಿಸಿದರು.
ಈ ಕುರಿತು ಇಂದು ಪ್ರಕಟಣೆ ನೀಡಿರುವ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆಯು ನಿರಂತರ ಪ್ರಕ್ರಿಯೆಯಾಗಿದ್ದು, ಅರ್ಹ ಮತದಾರರ ಹೆಸರು ಸೇರ್ಪಡೆ ಮಾಡುವುದು ಮತ್ತು ಮರಣ ಹೊಂದಿದವರ, ಒಂದಕ್ಕಿಂತ ಹೆಚ್ಚುಬಾರಿ ಡುಬ್ಲಿಕೇಟ್ ಆದ ಎಂಟ್ರಿಗಳನ್ನು ಹಾಗೂ ಖಾಯಂ ಆಗಿ ಸ್ಥಳಾಂತರಗೊಂಡವರ ಹೆಸರುಗಳನ್ನು ನಿರಂತರವಾಗಿ ನಿಯಮಾನುಸಾರ ತೆಗೆದು ಹಾಕುವ ಕಾರ್ಯ ಮಾಡಲಾಗತ್ತಿದೆ.

ದೆಹಲಿ ಮೂಲದ ಎ.ಎಸ್.ಆರ್ ಕಂಪನಿಗೆ ಸಮೀಕ್ಷೆ ನಡೆಸಲು ಜಿಲ್ಲಾಡಳಿತದಿಂದ ಯಾವುದೇ ಅನುಮತಿ ನೀಡಿರುವುದಿಲ್ಲ. ಅಲ್ಲದೇ ನಿಯಮಬಾಹಿರವಾಗಿ ಜಿಲ್ಲಾಡಳಿತದ ಅನುಮತಿಯಿಲ್ಲದೆ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಸಮೀಕ್ಷೆಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ, ಸೂಕ್ತಕ್ರಮ ಕೈಗೊಂಡು ವರದಿಯನ್ನು ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಈ ಕಛೇರಿಯಿಂದ ಈಗಾಗಲೇ ನಿರ್ದೇಶಿಸಲಾಗಿದೆ. ಎ.ಎಸ್.ಆರ್ ಕಂಪನಿಗೂ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಿರುವದಕ್ಕೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
Also read: ಗಮನಿಸಿ: ಡಿ.4ರಂದು ಪುರದಾಳು, ಶ್ರೀರಾಂಪುರ ಸೇರಿ ಹಲವು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಸಾರ್ವಜನಿಕರು ವೋಟರ್ ಹೆಲ್ಪ್ ಲೈನ್ ಅಪ್ಲಿಕೇಶನ್ (VHA App) ಬಳಸಿ, www.nvsp.in ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‍ಸೈಟ್ https://ceo.karnataka.gov.in ಮೂಲಕ ವೋಟರ್ ಐಡಿ ನಮೂದಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.












Discussion about this post