ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ವೃತ್ತಿಪರ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ರಾಷ್ಟೋತ್ಥಾನ ಪರಿಷತ್ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ‘ಜಯದೇವ ಸ್ಮಾರಕ ರಾಜ್ಯೋತ್ಥಾನ ಆಸತ್ರೆ ಮತ್ತು ಸಂಶೋಧನಾ ಕೇಂದ್ರ’ ಪ್ರಾರಂಭಿಸುತ್ತಿದ್ದು, ಡಿ.5ರ ಸಂಜೆ 6 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ.
ಮೈಸೂರಿನ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಗಳು ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ. ಇನ್ಫೋಸಿಸ್ ಫೌಂಡೇಷನ್‌ನ ಸಂಸ್ಥಾಪಕರಾದ ಸುಧಾಮೂರ್ತಿ, ನಾರಾಯಣ ಹೆಲ್ತ್‌ನ ಸ್ಥಾಪಕರು ಮತ್ತು ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಲಿದ್ದಾರೆ.
ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ವೃತ್ತಿಪರ ಗುಣಮಟ್ಟದ ಆರೋಗ್ಯಸೇವೆ ನೀಡುವ ಉದ್ದೇಶದಿಂದ ರಾಷ್ಟೋತ್ಥಾನ ಪರಿಷತ್ ‘ಜಯದೇವ ಸ್ಮಾರಕ ರಾಷ್ಟೋತ್ಥಾನ ಆಸತ್ರೆ ಮತ್ತು ಸಂಶೋಧನ ಕೇಂದ್ರ’ವನ್ನು ಪ್ರಾರಂಭಿಸಲು ಮುಂದಾಗಿದ್ದು, ಈ ಆಸತ್ರೆಯು ಒಂದೇ ಸೂರಿನಡಿ ಆಧುನಿಕ ವೈದ್ಯಪದ್ಧತಿ (ಆಲೋಪತಿ), ಆಯುರ್ವೇದ, ಹೋಮಿಯೋಪತಿ, ಯೋಗ, ನ್ಯಾಚುರೋಪತಿ ಮೊದಲಾದ ಚಿಕಿತ್ಸಾ ಸೌಲಭ್ಯಗಳನ್ನು ಒಳಗೊಂಡಿರುವ ಒಂದು ಸಮಗ್ರ ಚಿಕಿತ್ಸೆಯ ಮಲ್ಟಿಸಷಾಲಿಟಿ ಆಸ್ಪತ್ರೆ’ಯಾಗಿ ಸೇವೆ ಸಲ್ಲಿಸಲಿದೆ.
‘ಜಯದೇವ ಸ್ಮಾರಕ ರಾಷ್ಟೋತ್ಥಾನ ಆಸತ್ರೆ ಮತ್ತು ಸಂಶೋಧನ ಕೇಂದ್ರ’ದಲ್ಲಿ ಪ್ರಸ್ತುತ 19 ಜನರಲ್ ವಾರ್ಡ್‌ಗಳು, 72 ಸೆಮಿ ಪ್ರೈವೇಟ್ ವಾರ್ಡ್‌ಗಳು, II ಎಮರ್ಜೆನ್ಸಿ ವಾರ್ಡ್‌ಗಳು ಹಾಗೂ 17 ಪ್ರೈವೇಟ್ ವಾರ್ಡ್‌ಗಳು ಸೇರಿದಂತೆ ಒಟ್ಟು 160 ಹಾಸಿಗೆಗಳನ್ನು ಹೊಂದಿರುವ ಸಮಗ್ರ ಆಧುನಿಕ ವೈದ್ಯಕೀಯ ಮೂಲಸೌಕರ್ಯಗಳು ಲಭ್ಯವಿದೆ. ಅತ್ಯಾಧುನಿಕ ವೈದ್ಯಕೀಯ ಮೂಲಸೌಕರ್ಯ, ಉತ್ತಮ ತಂತ್ರಜ್ಞಾನ, ತಜ್ಞ ವೈದ್ಯರು ಹಾಗೂ ಸೇವಾಮನೋಭಾವದ ವೈದ್ಯಕೀಯ ಸಿಬ್ಬಂದಿಗಳನ್ನು ಈ ಆಸ್ಪತ್ರೆ ಹೊಂದಿದೆ, ಅಗತ್ಯ ಬರುವವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಆಸತ್ರೆಯ ಗುರಿಯಾಗಿದೆ.
ವೈದ್ಯಕೀಯ ಚಿಕಿತ್ಸಾ ವಿಭಾಗಗಳು: ಜನರಲ್ ಮೆಡಿಸಿನ್, ಕಾರ್ಡಿಯಾಲಜಿ, ಆರ್ಥೋಪೆಡಿಕ್ ನ್ಯೂರಾಲಜಿ, ಗೈನಕಾಲಜಿ, ಗ್ಯಾಸ್ಟೋಎಂಟರಾಲಜಿ, ಪೀಡಿಯಾಟ್ರಿಕ್ಸ್, ಆಯುರ್ವೇದ, ಹೋಮಿಯೋಪತಿ, ಯೋಗ ಮತ್ತು ನ್ಯಾಚುರೋಪತಿ, ಲಭ್ಯ ಸೇವೆಗಳು,
ಸೌಲಭ್ಯಗಳು: ತುರ್ತು ಚಿಕಿತ್ಸಾ ಘಟಕ, ಡಯಾಲಿಸಿಸ್, ಓಟಿ, ಐ.ಸಿ.ಯು. ಡಾಗೊಸ್ಟಿಕ್ ಸೇವೆಗಳು ಲಭ್ಯವಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post