ಕಲ್ಪ ಮೀಡಿಯಾ ಹೌಸ್ | ಮಧ್ಯಪ್ರದೇಶ |
ಬಸ್’ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ರತ್ಲಾಂ ಜಿಲ್ಲೆಯಲ್ಲಿ ಬಸ್’ಗಾಗಿ ರಸ್ತೆಬದಿಯಲ್ಲಿ ಜನರು ಕಾಯುತ್ತಿದ್ದರು. ಈ ವೇಳೆ ಟ್ರಕ್’ವೊಂದು ಆರು ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಎಂಟು ಮಂದಿಯ ಪರಿಸ್ಥಿತಿ ಚಿಂತಾಚನಕವಾಗಿದೆ ಎಂದು ವರದಿಯಾಗಿದೆ.
ಚಕ್ರ ಸ್ಫೋಟಗೊಂಡ ಬೆನ್ನಲ್ಲೇ ಟ್ರಕ್ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
Also read: ಸಾಧಿಸುವ ಛಲ, ಪರಿಶ್ರಮವಿದ್ದರೆ ವಿಕಲಚೇತನರೂ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post