ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಭತ್ತ ಒಕ್ಕುವ ಯಂತ್ರಕ್ಕೆ ರೈತನ ಕೈ ಸಿಲುಕಿ ತುಂಡಾಗಿರುವ ಘಟನೆ ತಾಲೂಕಿನ ಮೂಡುಗೊಪ್ಪ ಗ್ರಾಪಂ ವ್ಯಾಪ್ತಿಯ ದೇವಗಂಗೆಯಲ್ಲಿ ಮಂಗಳವಾರ ನಡೆದಿದೆ.
ಗಂಭೀರವಾಗಿ ಗಾಯಗೊಂಡ ರೈತ ವಿಶ್ವನಾಥ್ ಮತ್ತು ತುಂಡಾಗಿದ್ದ ಕೈಯನ್ನು ಹಿಡಿದುಕೊಂಡು ಹೊಸನಗರ ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















