ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಸಂಭ್ರಮದಲ್ಲಿ ನಡೆಸಿಕೊಂಡು ಬರುತ್ತಿರುವ ಉಪನ್ಯಾಸ ಸರಣಿಯ ಆರನೇ ಮಾಲಿಕೆ ಹಾಗೂ ಸಿ. ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮವನ್ನು ಡಿ.10 ರಂದು ಬೆಳಗ್ಗೆ 10:30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟಿಸ್ ಕೃಷ್ಣಾ ಎಸ್. ದೀಕ್ಷಿತ್ ಘಟಿಕೋತ್ಸವ ಮಾತುಗಳನ್ನಾಡಲಿದ್ದು, ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆಯ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಅಡ್ವೋಕೇಟ್ ಜನರಲ್ ಅಶೋಕ ಹಾರನಹಳ್ಳಿ ಮಾನವ ಹಕ್ಕುಗಳ ಕುರಿತು ವಿಶೇಷ ಅಮೃತ ಉಪನ್ಯಾಸ ನೀಡಲಿದ್ದಾರೆ.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷರಾದ ಸಿ.ಆರ್. ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ. ನಾರಾಯಣ್, ಖಜಾಂಚಿಗಳಾದ ಡಿ.ಜಿ. ರಮೇಶ್ ಉಪಸ್ಥಿತರಿರುತ್ತಾರೆ.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷರಾದ ಸಿ.ಆರ್. ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ. ನಾರಾಯಣ್, ಖಜಾಂಚಿಗಳಾದ ಡಿ.ಜಿ. ರಮೇಶ್ ಉಪಸ್ಥಿತರಿರುತ್ತಾರೆ.Also read: ರೈತರ ಸಂಕಷ್ಟಗಳಿಗೆ ಸ್ಪಂದಿಸುವುದೇ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಶ್ರೀರಾಮುಲು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















