ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ವಾತಂತ್ರ್ಯ ಹೋರಾಟಗಾರರಿಂದ ಸ್ಥಾಪಿಸಿದ ಎನ್ಇಎಸ್ ಸಂಸ್ಥೆ ಶಿವಮೊಗ್ಗದ ಹೆಮ್ಮೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಸೆಲ್ವಮಣಿ ಅಭಿಪ್ರಾಯಪಟ್ಟರು.
ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾಸಂಸ್ಥೆಗಳನ್ನು ನಡೆಸುವುದು ಕಷ್ಟದ ವಿಚಾರ. ಖಾಸಗಿಯಾಗಿರಲಿ ಸರ್ಕಾರವಾಗಲಿ, ತನ್ನದೇ ಆದ ಅನೇಕ ಸವಾಲುಗಳನ್ನು ವಿದ್ಯಾಸಂಸ್ಥೆ ನಡೆಸುವಾಗ ಎದುರಿಸುವುದು ಸಹಜ. ಅದರೇ ಅಂತಹ ಯಾವುದೇ ಸವಾಲುಗಳಿಗೆ ಕುಂದದೆ ಲಾಭಾಂಶದ ನಿರೀಕ್ಷೆ ಇಲ್ಲದೇ ಎನ್ಇಎಸ್ ಸಂಸ್ಥೆ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ವಿದ್ಯಾಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ. ಶಿಕ್ಷಣದ ಜೊತೆಗೆ ಸಂಸ್ಕಾರ ಸೇರಿದಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಮೌಲ್ಯಯುತವಾದ ಶಿಕ್ಷಣವನ್ನು ನೀಡುವ ಜವಾಬ್ದಾರಿ ಶಿಕ್ಷಕರ, ಪೋಷಕರ ಮೇಲಿದೆ ಎಂದು ಹೇಳಿದರು.
Also read: ಕರ್ನಾಟಕ ಪೊಲೀಸ್ ವ್ಯವಸ್ಥೆಗೆ ದೇಶದಲ್ಲೇ ಅತ್ಯುನ್ನತ ಮನ್ನಣೆ ಸಿಕ್ಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶಂಸೆ
ವೇದಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್,ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಮುಖ್ಯೋಪಾಧ್ಯಾಯರಾದ ನವೀನ ಪಾಯಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post