ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ತಾಲ್ಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ಕ್ಯಾಂಟರ್‌ಗೆ ಲೋಡ್ ಮಾಡುವಾಗ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿ 1.76 ಲಕ್ಷ ಮೌಲ್ಯದ 80 ಕ್ವಿಂಟಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕ್ಯಾಂಟರ್ ವಾಹನಕ್ಕೆ ಲೋಡ್ ಮಾಡುತ್ತಿದ್ದ ಆರೋಪಿ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಮೊಹಮ್ಮದ್ ಸಮೀರ್ (38), ವಾಹನ ಚಾಲಕ ಊರುಗಡೂರಿನ ಪರ್ವೇಜ್ ಪಾಷಾ (42) ಎಂಬುವವರನ್ನು ಬಂಧಿಸಲಾಗಿದೆ.
ಪ್ರಕರಣದ ವಿವರ: ಮೊಹಮ್ಮದ್ ಸಮೀರ್ ಎಂಬ ವ್ಯಕ್ತಿಯು ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಲು, ಅನಧಿಕೃತವಾಗಿ ಸಂಗ್ರಹಿಸಿ ಕ್ಯಾಂಟರ್ ವಾಹನಕ್ಕೆ ಲೋಡ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕರು, ಪಿಎಸ್‌ಐ ಮತ್ತು ಸಿಬ್ಬಂದಿಗಳ ನೇತೃತ್ವ ತಂಡವು ಆಹಾರ ನಿರೀಕ್ಷಕರು ಭದ್ರಾವತಿರವರೊಂದಿಗೆ ದಾಳಿ ನಡೆಸಿದ್ದಾರೆ.
Also read: ಅಕ್ರಮ ಜೂಜಾಟ: ಕ್ಲಬ್ ಮೇಲೆ ಪೊಲೀಸ್ ದಾಳಿ – 12 ಜನರ ಬಂಧನ
ಒಟ್ಟು 160 ಚೀಲಗಳಲ್ಲಿ ತುಂಬಿದ್ದ ಅಂದಾಜು ಮೌಲ್ಯ 1,76,000/- ರೂಗಳ 80 ಕ್ವಿಂಟಲ್ ಪಡಿತರ ಅಕ್ಕಿಯನ್ನು ಮತ್ತು ಕೃತ್ಯಕ್ಕೆ ಬಳಸಿದ ಒಂದು ಕ್ಯಾಂಟರ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post