ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಹಾಸ್ಟೆಲ್’ನಲ್ಲಿ ಅಸಭ್ಯ ವರ್ತನೆ ತೋರಿದ ಹೆಡ್ ಮಾಸ್ಟರ್’ಗೆ ವಿದ್ಯಾರ್ಥಿನಿಯರೇ ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಹಾಸ್ಟೆಲ್’ವೊಂದರಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ತತಕ್ಷಣ ಆಕೆ ತನ್ನ ಸ್ನೇಹಿತೆಯರಿಗೆ ವಿಷಯ ತಿಳಿಸಿದ್ದು, ತತಕ್ಷಣ ಆಕ್ರೋಶಗೊಂಡ ವಿದ್ಯಾರ್ಥಿನಿಯರೆಲ್ಲ ಸೇರಿ ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ಬಂದು ಕಾಮುಕ ಶಿಕ್ಷಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇನ್ನು ಪೊಲೀಸರಿಗೂ ಈ ಬಗ್ಗೆ ಮಾಹಿತಿ ನೀಡಿದ್ದು, ಕೂಡಲೇ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ. ಆತನ ಮೊಬೈಲ್ ಪರಿಶೀಲಿಸಿದಾಗ ಶಿಕ್ಷಕನ ಕಾಮ ಪುರಾಣದ ಮತ್ತಷ್ಟು ಮಾಹಿತಿ ಗೊತ್ತಾಗಿದೆ. ಶಿಕ್ಷಕಿಯೊಬ್ಬರನ್ನೂ ಈತ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದು, ಇದರ ವೀಡಿಯೋಗಳನ್ನು ಮೊಬೈಲ್ ನಲ್ಲಿ ಇಟ್ಟುಕೊಂಡಿದ್ದ. ಆ ವೀಡಿಯೋವನ್ನು ವಿದ್ಯಾರ್ಥಿನಿಯರಿಗೆ ತೋರಿಸಿ ತನ್ನೊಂದಿಗೆ ಸಹಕರಿಸದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.
Also read: ಹಾಸ್ಟೆಲ್’ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ
ಇನ್ನು ಕಾಮುಕ ಶಿಕ್ಷಕನನ್ನು ಹುದ್ದೆಯಿಂದ ವಜಾಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















