ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸರು ನಿನ್ನೆ ರಾತ್ರಿ ನಡೆಸಿದ ದಿಢೀರ್ ವಿಶೇಷ ಕಾರ್ಯಾಚರಣೆಯ ವೇಳೆ ಕುಡಿದು ವಾಹನ ಚಲಾಯಿಸುತ್ತಿದ್ದ 46 ಸವಾರರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ಸೂಚನೆಯ ಮೇರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ಚೆಕ್ ಪೋಸ್ಟ್‌ಗಳನ್ನು ಹಾಕಿ ವಾಹನ ತಪಾಸಣೆ ನಡೆಸಲಾಯಿತು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 46 ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ವಿಭಾಗದಲ್ಲಿ ಭದ್ರಾವತಿ 3. ಸಾಗರ 6, ಶಿಕಾರಿಪುರ 5, ತೀರ್ಥಹಳ್ಳಿಯಲ್ಲಿ 16 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ನಡೆಸಿದ ಪೊಲೀಸರು, ಮದ್ಯಪಾನ ಮಾಡಿ ವಾಹನ ಚಲಾಯಿಸದಂತೆ ಸವಾರರಿಗೆ ಸೂಚನೆಯನ್ನು ನೀಡಿದರು.
ಭದ್ರಾವತಿ ನಗರದಲ್ಲಿ ತೆರೆಯಲಾಗಿದ್ದ ಚೆಕ್‌ಪೋಸ್ಟ್‌ಗೆ ನಿನ್ನೆ ರಾತ್ರ ಜಿಲ್ಲಾ ರಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post