ಕಲ್ಪ ಮೀಡಿಯಾ ಹೌಸ್ | ಆನವಟ್ಟಿ |
ಸೊರಬ ತಾಲೂಕಿನ ಆನವಟ್ಟಿ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಆನವಟ್ಟಿ ಠಾಣೆ ವ್ಯಾಪ್ತಿಯಲ್ಲಿನ ತುಡನೂರು ಎಂಬಲ್ಲಿ ಸಲೀಂ (26) ಎಂಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಆತನಿಗೆ ಸಂಬಂಧಿಸಿದ ಹೊಲದ ಪಕ್ಕದಲ್ಲಿಯೇ ಹರಿಯುವ ಹಳ್ಳದಲ್ಲಿ ಹಲ್ಲೆ ಮಾಡಿದ ರೀತಿಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಈ ಸಂಬಂಧ ಆನವಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಸ್ಥಳ ಮಹಜರ್ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ ಘಟನೆಗೆ ಕಾರಣವೇನು ಎಂಬುದು ಇದುವರೆಗೂ ತಿಳಿದುಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post