ಕಲ್ಪ ಮೀಡಿಯಾ ಹೌಸ್ | ಸೊರಬ |
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಎನ್ಎಸ್’ಯುಐ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಕೆ.ಪಿ. ಪ್ರವೀಣ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಯಾವುದೇ ಪೂರ್ವ ತಯಾರಿ ಇಲ್ಲದೇ ಜಾರಿಗೊಳಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ ವಿರೋಧಿ ನೀತಿಯಿಂದಾಗಿ ವಿದ್ಯಾರ್ಥಿಗಳಿಗೆ ಅನಗತ್ಯ ತೊಂದರೆಯಾಗುತ್ತಿದೆ. ಕೂಡಲೇ ಇದನ್ನು ರದ್ದುಪಡಿಸಬೇಕು. ತಾಲೂಕಿನಲ್ಲಿ ವಿದ್ಯಾರ್ಥಿಗಳು ಬಸ್ ಸಮಸ್ಯೆ, ವಸತಿ ನಿಲಯಗಳ ಸಮಸ್ಯೆ ಎದುರಿಸುತ್ತಿದ್ದಾರೆ. ಜೊತೆಗೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ರದ್ದು ಮಾಡಿರುವ ಕ್ರಮ ಖಂಡನೀಯ ಎಂದರು.

Also read: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು, ಉಳಿದ ಮೂವರ ರಕ್ಷಣೆ
ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಕೊಡಕಣಿ, ತಾಲೂಕು ಉಪಾಧ್ಯಕ್ಷ ಎನ್.ಜಿ. ಸಂಜಯ್, ಪ್ರಧಾನ ಕಾರ್ಯದರ್ಶಿ ಶಶಿ ಚೀಲನೂರು, ಮಧು, ಎನ್’ಎಸ್’ಯುಐ ಪ್ರಮುಖರಾದ ಟಿ.ಕೆ. ಭರತ್, ಎಸ್. ದರ್ಶನ್, ಎಂ.ಆರ್. ಮನೋಜ್, ಮಿಥುನ್, ಸಚಿನ್, ಪುನೀತ್, ಸಂದೇಶ್, ಅಜಿತ್, ಸೃಜನ್, ಶ್ರೀಹರ್ಷ ಶೆಟ್ಟಿ, ಯಶೋಧರ, ಸುನೀಲ್, ಸಂಜಯ್, ವರುಣ್, ಚೇತನ್, ರವಿ ಕಿರಣ್, ಪವನ್, ಪ್ರವೀಣ್, ಸುಮಂತ್ ಸೇರಿದಂತೆ ಇತರರಿದ್ದರು.
(ವರದಿ: ಮಧುರಾಮ್, ಸೊರಬ)












Discussion about this post