No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎತ್ತಿನ ಓಟ ಕ್ರೀಡೆ ಆಯೋಜಿಸಲು ಅಗತ್ಯ ಮಾರ್ಗಸೂಚಿಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 20, 2022
in ಶಿವಮೊಗ್ಗ
0
ಎತ್ತಿನ ಓಟ ಕ್ರೀಡೆ ಆಯೋಜಿಸಲು ಅಗತ್ಯ ಮಾರ್ಗಸೂಚಿಗಳೇನು ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಎತ್ತಿನ ಓಟ/ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಆಯೋಜಕರು ಕ್ರೀಡೆಗೆ ಮುನ್ನ ಸ್ಥಳೀಯ ವ್ಯಾಪ್ತಿಯ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ತಿಳಿಸಿದರು.

ಎತ್ತಿನ ಓಟ/ಎತ್ತಿನ ಗಾಡಿ ಓಟ ಕ್ರೀಡೆಯ ಮಾರ್ಗಸೂಚಿ ಕುರಿತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ಕರ್ನಾಟಕ ತಿದ್ದುಪಡಿ) ಸುಗ್ರೀವಾಜ್ಞೆ 2017 ರನ್ವಯ ಎತ್ತಿನ ಓಟ/ಎತ್ತಿನ ಗಾಡಿ ಓಟ ಆಯೋಜಿಸುವ ಆಯೋಜಕರು ಕ್ರೀಡೆಯ 15 ದಿನಗಳ ಮೊದಲೇ ಸ್ಥಳೀಯ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು.
ಎತ್ತಿನ ಓಟ ನಡೆಸುವ ಗ್ರಾಮಗಳಲ್ಲಿ ಮೊದಲು ಗ್ರಾಮ ಪಂಚಾಯ್ತಿ ಮತ್ತು ಪಶುವೈದ್ಯರಿಂದ ಎನ್‍ಓಸಿ ಪಡೆದು ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಬೇಕು. ತಹಶೀಲ್ದಾರರಿಗೆ ಸಲ್ಲಿಸಿದ ಅರ್ಜಿಯನ್ನು ಅವರು ವಿವರವಾಗಿ ಪರಿಶೀಲಿಸಿ ಸೂಕ್ತ ಶಿಫಾರಸ್ಸಿನೊಂದಿಗೆ ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತಾರೆ. ಜಿಲ್ಲಾಧಿಕಾರಿಗಳು ಈ ಕ್ರೀಡೆಯಿಂದ ಆಗುವ ಸಾಧಕ ಬಾಧಕಗಳನ್ನು ಪರಿಶೀಲಿಸಿ ಅನುಮತಿ ನೀಡುವರು ಅಥವಾ ತಿರಸ್ಕರಿಸುವರು.

ಒಂದು ವೇಳೆ ಅನುಮತಿ ಪಡೆಯದೇ ಹೋದಲ್ಲಿ ಸ್ಥಳೀಯ ಸಂಸ್ಥೆಗಳು ಜವಾಬ್ದಾರರಾಗುತ್ತಾರೆ ಹಾಗೂ ಆಯೋಜಕರ ವಿರುದ್ದ ಸೂಕ್ತ ಕ್ರಮ ವಹಿಸಲಾಗುವುದು. ಈ ಕ್ರೀಡೆಯ ಆಯೋಜನೆ ಪರಿಶೀಲಿಸಲು ಕಂದಾಯ ಇಲಾಖೆ, ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲೆಯ ಎಸ್‍ಪಿಸಿಎ(ಸೊಸೈಟಿ ಫಾರ್ ಪ್ರಿವೆನ್ಶನ್ ಆಫ್ ಕ್ರುಯೆಲ್ಟಿ ಆಫ್ ಅನಿಮಲ್)ಪ್ರತಿನಿಧಿ ಇರುವರು.
ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಇಓ, ಪಶುಸಂಗೋಪನೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ಷರತ್ತುಗಳಿಗೊಳಪಟ್ಟು ಎತ್ತಿನ ಓಟ ಕ್ರೀಡೆಯನ್ನು ನಡೆಸುವ ಸಂಬಂಧ ಅಧಿಕಾರಿಗಳಿಗೆ ಸಭೆ ನಡೆಸಿ ಅರಿವು ಮೂಡಿಸಬೇಕು ಹಾಗೂ ಈ ಸಂಬಂಧ ತಂಡ ಸನ್ನದ್ದವಾಗಿರಬೇಕು ಎಂದರು.

Also read: ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಸೆಲ್ವಮಣಿ

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಎತ್ತಿನ ಓಟದ ಅಧಿಸೂಚನೆ ಉದ್ದೇಶ ಪ್ರಾಣಿಗಳಿಗೆ ಆಗುವ ಕ್ರೌರ್ಯ ಹಾಗೂ ಮನುಷ್ಯರಿಗೆ ಆಗುವ ಹಾನಿ ತಡೆಗಟ್ಟುವುದಾಗಿದ್ದು, ಕ್ರೀಡೆಯಲ್ಲಿ ಭಾಗಿಯಾಗುವ ಎತ್ತುಗಳಿಗೆ ಅಪಘಾತ ಸಂಭವಿಸಿದಲ್ಲಿ ತುರ್ತು ವೈದ್ಯಕೀಯ ವ್ಯವಸ್ಥೆ, ಆಂಬುಲೆನ್ಸ್ ಇತರೆ ವ್ಯವಸ್ಥೆ ಸೇರಿದಂತೆ ಮಾರ್ಗಸೂಚಿಯಲ್ಲಿನ ಎಲ್ಲ ಅಂಶಗಳನ್ನು ಅನುಸರಿಸಬೇಕು. ಜೊತೆಗೆ ಕ್ರೀಡಾ ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ, ಜನರನ್ನು ನಿಯಂತ್ರಿಸಲು ಸ್ಥಳೀಯರನ್ನು ನೇಮಿಸಬೇಕು. ಹಾಗೂ ಆ ಸ್ಥಳದಲ್ಲಿ ಮದ್ಯ ಸೇವನೆ ಮಾಡಿದವರಿಗೆ ಬಿಡಬಾರದು ಎಂದು ತಿಳಿಸಿದರು.
ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಶಿವಯೋಗಿ ಯಲಿ ಮಾತನಾಡಿ, ಕ್ರೀಡೆಯ ಆಯೋಜಕರು ಎತ್ತುಗಳಿಗೆ ಒಂದು ಪ್ರತ್ಯೇಕ ಸಮತಟ್ಟಾದ ಟ್ರ್ಯಾಕ್ ನಿರ್ಮಿಸಿ, ಗರಿಷ್ಟ 100 ಮೀಟರ್ ಉದ್ದ ಮತ್ತು 7.5 ಮೀಟರ್ ಅಗಲ ಇರಬೇಕು. ಹಾಗೂ ಮಧ್ಯಾಹ್ನ 12 ರಿಂದ 3 ಗಂಟೆ ನಡುವಿನ ಅವಧಿ 38 ಡಿಗ್ರಿ ಸಿ ಉಷ್ಣಾಂಶ ಮೀರಿದ ಯಾವುದೇ ಪ್ರದೇಶದಲ್ಲಿ ಎತ್ತಿನ ಓಟ ಕ್ರೀಡೆಗಾಗಿ ಎತ್ತುಗಳನ್ನು ಬಳಸುವಂತಿಲ್ಲ ಎಂದರು.

ಸಭೆಯಲ್ಲಿ ಪ್ರಭಾರ ಐಎಎಸ್ ಅಧಿಕಾರಿ ದಲ್ಜೀತ್ ಸಿಂಗ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ್, ತಹಶೀಲ್ದಾರ್ ಡಾ.ನಾಗರಾಜ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಇತರೆ ತಾಲ್ಲೂಕುಗಳ ತಹಶೀಲ್ದಾರ್, ಇಓ, ಪಶುಸಂಗೋಪನೆ ಇತರೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಸೆಲ್ವಮಣಿ

Next Post

2022-23ನೇ ಸಾಲಿನ ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಉತ್ತಮ‌ ಪ್ರತಿಕ್ರಿಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
2022-23ನೇ ಸಾಲಿನ ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಉತ್ತಮ‌ ಪ್ರತಿಕ್ರಿಯೆ

2022-23ನೇ ಸಾಲಿನ ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಉತ್ತಮ‌ ಪ್ರತಿಕ್ರಿಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL