ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಉತ್ತರ ಭಾಗದಲ್ಲಿನ ಬಾಕಿ ಉಳಿದ 15 ಕಿಮೀ ಉದ್ದದ ಬೈಪಾಸ್ ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ, MP Raghavendra ಶಿವಮೊಗ್ಗ ನಗರಕ್ಕೆ 34 ಕಿಮೀ ಉದ್ದದ ರಿಂಗ್ ರಸ್ತೆ ಪೂರ್ಣಗೊಳಿಸಲು ಉತ್ತರ ಭಾಗದಲ್ಲಿನ ಬೈಪಾಸ್ ರಸ್ತೆ ಕಾಮಗಾರಿಗೆ ನೆರವು ನೀಡಲು ಕೇಂದ್ರ ಭೂ ಸಾರಿಗೆ ಸಚಿವರನ್ನು ಕೋರಲಾಗಿತ್ತು ಎಂದು ತಿಳಿಸಿದ್ದಾರೆ.
ನಮ್ಮ ಕೋರಿಕೆಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶಿವಮೊಗ್ಗದ ಉತ್ತರ ಭಾಗದ ಬೈಪಾಸ್ ರಸ್ತೆ ಕಾಮಗಾರಿಗೆ ಮಂಜೂರಾತಿ ದೊರಕಿಸಿ, ಅಗತ್ಯ ನೆರವು ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸದಸ್ಯರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Also read: ಕುಟುಂಬದ ಸದಸ್ಯೆಯಂತೆ ಭಾವಿಸಿ ತಮ್ಮ ಗೆಲುವಿಗೆ ಶ್ರಮಿಸಿ: ಶಾರದ ಅಪ್ಪಾಜಿ ಮನವಿ












Discussion about this post