ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆ. 7ರಿಂದ ಪ್ರಾರಂಭಗೊಳ್ಳಲಿದೆ. ಜಾತ್ರೋತ್ಸವ ಅಂಗವಾಗಿ ಫೆ. 8ರಿಂದ ಫೆ. 15ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕಲಾತಂಡಗಳು ಜ.12ರೊಳಗೆ ತಮ್ಮ ತಂಡದ ಹೆಸರನ್ನು ಅಂಚೆ ಮೂಲಕ ಅಥವಾ ಖುದ್ದಾಗಿ ಕಚೇರಿಗೆ ತಲುಪಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸುವವರು ಶ್ರೀ ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿ, ಸಾಂಸ್ಕೃತಿಕ ಸಮಿತಿ ವಿಭಾಗ, ಜೆಸಿ ರಸ್ತೆ, ಸಾಗರ ಶಿವಮೊಗ್ಗ ಜಿಲ್ಲೆ ವಿಳಾಸಕ್ಕೆ ಕಳಿಸಬೇಕು. ಹೆಚ್ಚಿನ ವಿವರಗಳಿಗೆ ಲೋಕೇಶಕುಮಾರ್ ಮೊ. 9902428952, 6361556719, 9448630967ರಲ್ಲಿ ಸಂಪರ್ಕಿಸಲು ಕೋರಲಾಗಿದೆ.
Also read: ಸೌದಿ ಅರೇಬಿಯಾದ ಪರೀಕ್ಷಾ ಕೇಂದ್ರಗಳಲ್ಲಿ ಅಬಯಾ ನಿಷೇಧ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post