ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಸಂಭ್ರಮದಲ್ಲಿ ನಡೆಸಿಕೊಂಡು ಬರುತ್ತಿರುವ ಉಪನ್ಯಾಸ ಸರಣಿಯ ಏಳನೇ ಮಾಲಿಕೆ ಕಾರ್ಯಕ್ರಮವನ್ನು ಡಿ.24 ರ ಶನಿವಾರ ಬೆಳಗ್ಗೆ 10:30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ ನಾಗರತ್ನ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಜೆ.ಎಂ ಖಾಜಿ, ಎನ್.ಇ.ಎಸ್ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್ ಉಪಸ್ಥಿತರಿರುತ್ತಾರೆ.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















