ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಮಾತನಾಡಿರುವ ರಾಜ್ಯ ಸಂಪುಟ ಸಭೆಯ ನಂತರ ಮಾತನಾಡಿರುವ ಸಚಿವರಾದ ಮಾಧುಸ್ವಾಮಿ ಹಾಗೂ ಆರ್. ಅಶೋಕ್, ಪಂಚಮಸಾಲಿ, ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಒಪ್ಪಿಗೆ ಪಡೆಯಲಾಗಿದೆ ಎಂದರು.

ಒಕ್ಕಲಿಗರಿಗೆ 2 ಸಿ ಅಡಿ ಮೀಸಲಾತಿ ನೀಡಲಿದ್ದು, 3 ಎನಲ್ಲಿದ್ದ ಒಕ್ಕಲಿಗರು 2 ಡಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದಿದ್ದಾರೆ.
ಹಾಗೆಯೇ, ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10ರಿಂದ ಶೇ.3ಕ್ಕೆ ಇಳಿಕೆ ಮಾಡಲಾಗುತ್ತದೆ. ಇಡಬ್ಸ್ಯೂಎಸ್ ಮೀಸಲಾತಿ ಶೇ.ರಷ್ಟು 2 ಸಿ ಹಾಗೂ 2 ಡಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.













Discussion about this post