ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ಖ್ಯಾತಿ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಅವರಿಗೆ ತೀವ್ರತರವಾದ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.
ತೀವ್ರವಾಗಿ ಗಾಯಗೊಂಡಿರು ರಿಷಬ್ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸುಟ್ಟು ಕರಕಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















