ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಅನುರಾಧ ಜಿ ಅವರು ಸುಶಾಸನ ಮಾಸಾಚರಣೆಯ ಭಾಗವಾಗಿ ಶುಕ್ರವಾರ ಶಿವಮೊಗ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದರು.
ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ತನ್ನ ಇಲಾಖೆ ವ್ಯಾಪ್ತಿಯ ಎಲ್ಲ ಸರ್ಕಾರಿ ಸಂಸ್ಥೆಗಳಿಗೆ ಡಿಸೆಂಬರ್ ತಿಂಗಳನ್ನು ಸುಶಾಸನ ಮಾಸವಾಗಿ ಆಚರಿಸಲು ನಿರ್ದೇಶಿಸಿದೆ. ಈ ಭಾಗವಾಗಿ ಕುಲಸಚಿವೆ ಅನುರಾಧ ಜಿ ಅವರು ಇಂದು ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಚರ್ಚೆಗಳನ್ನು ನಡೆಸಿ, ಕಾಲೇಜಿನ ಅವಶ್ಯಕತೆಗಳು, ಕುಂದುಕೊರತೆಗಳನ್ನು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ವಿವಿಯ ಯುಯುಸಿಎಂಎಸ್ ನೋಡಲ್ ಅಧಿಕಾರಿ ಪ್ರೊ. ಅಶ್ಫಕ್ ಅಹಮದ್ ಹಾಗೂ ಪ್ರಾಂಶುಪಾಲರಾದ ಡಾ. ಸಮೀವುಲ್ಲ ಹಾಜರಿದ್ದರು.
ಕಳೆದೆರಡು ದಿನಗಳಿಂದ ವಿವಿ ವ್ಯಾಪ್ತಿಯ ಕಾಲೇಜುಗಳಿಗೆ ಭೇಟಿ ನೀಡುತ್ತಿದ್ದು, ಶಿವಮೊಗ್ಗದ ಡಿವಿಎಸ್ ಕಾಲೇಜು ಮತ್ತು ನ್ಯಾಷನಲ್ ಕಾಲೇಜುಗಳ ಭೇಟಿ ಪೂರ್ಣಗೊಳಿಸಿದ್ದಾರೆ. ಭೇಟಿ ನೀಡುತ್ತಿರುವ ಕಾಲೇಜುಗಳಲ್ಲಿನ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಯುಯುಸಿಎಂಎಸ್ ವ್ಯವಸ್ಥೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳಲ್ಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post