ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸ ವರ್ಷಾಚರಣೆಯ ಸಂಭ್ರಮವನ್ನು ವಿಭಿನ್ನವಾಗಿ ಆಚರಿಸುವ ವೇಳೆ ಮಿಸ್ ಫೈರಿಂಗ್ ಆಗಿ ಗಾಯಗೊಂಡಿದ್ದ ಯುವಕ ವಿನಯ್ ಎನ್ನುವವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ವಿನಯ್ (35) ಪಿಎಚ್’ಡಿ ವಿದ್ಯಾರ್ಥಿಯಾಗಿದ್ದು, ಮೂಲತಃ ಹೊಸನಗರದ ಹುಡುಗ ಎನ್ನಲಾಗಿದೆ.
ವಿದ್ಯಾನಗರದಲ್ಲಿ ಮಂಜುನಾಥ್ ಓಲೆಕಾರ್ ಎನ್ನುವವರ ಮನೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ನಿನ್ನೆ ರಾತ್ರಿ 12 ಗಂಟೆ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಮಂಜುನಾಥ್ ಅವರು ತನ್ನ ಬಂದೂಕಿನಿAದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ಈ ಗುಂಡು ಮಿಸ್ ಆಗಿ ವಿನಯ್’ಗೆ ತಗುಲಿತ್ತು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ವಿನಯ್ ಇಂದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಂಜುನಾಥ್ ಗುಂಡು ಹಾರಿಸಿದ ಬಂದೂಕು ಲೈಸೆನ್ಸ್ ಹೊಂದಿತ್ತು ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















