ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರೀತಿ ನಿರಾಕರಿಸಿದ ಹಿನ್ನೆಲೆ ಸಹಪಾಠಿ ವಿದ್ಯಾರ್ಥಿನಿಯ ಕತ್ತು ಕೊಯ್ದು ತಾನು ಚಾಕುವಿನಿಂದ ಇರುದುಕೊಂಡಿರುವ ಘಟನೆ ನಗರದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ದುರಾದೃಷ್ಟವಶಾತ್ ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಕು ಇರಿದ ವ್ಯಕ್ತಿ ತ್ರೀವ್ರ ಗಾಯಗೊಂಡಿರುವ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ.
ಘಟನೆಯ ವಿವರ:
ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಟೆಕ್ ಓದುತ್ತಿದ್ದ ವಿದ್ಯಾರ್ಥಿನಿಗೆ ಬೇರೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಅಲ್ಲದೇ ಆಕೆ ಕೂಡ ಪ್ರೀತಿಸಬೇಕೆಂದು ಒತ್ತಾಯಿಸಿದ್ದಾನೆ. ಆದರೆ ಆ ವಿದ್ಯಾರ್ಥಿನಿಯು ಈತನ ಪ್ರೀತಿಯನ್ನು ನಿರಾಕರಿಸಿದ ಕಾರಣ ಕಾಲೇಜಿಗೆ ನುಗ್ಗಿ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಆನಂತರ ತನ್ನ ಕತ್ತು ಕೊಯ್ದುಕೊಂಡಿದ್ದಾನೆ. ಇದನ್ನು ಗಮನಿಸಿದ ಇತರರು ಗಾಯಗೊಂಡವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post