ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಮತ್ತು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ SP Mithun Kumar ಅವರು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸಭೆ ನಡೆಸಿ, ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಸೂಚನೆ ನೀಡಿದರು.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಿಟಿ ಬಸ್ ಗಳ ನಿಲುಗಡೆಯ ಕುರಿತಂತೆ ಮತ್ತು ಪ್ರಮುಖ ರಸ್ತೆಗಳಲ್ಲಿ ಭಾರೀ ಮತ್ತು ಸರಕು ವಾಹನಗಳ ಸಂಚಾರ ನಿರ್ಭಂಧಿಸಿ ಜಿಲ್ಲಾಧಿಕಾರಿಗಳು ಹೊರಡಿಸಿರುವ ಅಧಿಸೂಚನೆಯ ಬಗ್ಗೆ ಹಾಗೂ ಬಿಹೆಚ್ ರಸ್ತೆ ಯಲ್ಲಿ ಶಾಲಾ ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಾರಣ, ಬೆಳಗ್ಗೆ 8ರಿಂದ 10:30 ರವರೆಗೆ, ಮಧ್ಯಾಹ್ನ 4ರಿಂದ 6ಗಂಟೆಯ ವರೆಗಗಿನ ಸಮಯದಲ್ಲಿ ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವಂತೆ ಸೂಚನೆಗಳನ್ನು ನೀಡಿದರು.













Discussion about this post