No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಂತಿಮ ಪಟ್ಟಿಯಲ್ಲಿರುವ ಅರ್ಹ ಮತದಾರರ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 6, 2023
in ಶಿವಮೊಗ್ಗ
0
ಅಂತಿಮ ಪಟ್ಟಿಯಲ್ಲಿರುವ ಅರ್ಹ ಮತದಾರರ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು ಹಾಗೂ 714490 ಪುರುಷ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.

ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760ಪುರುಷ ಹಾಗೂ 10419 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1775 ಮತಗಟ್ಟೆಗಳು ಇವೆ ಎಂದು ಅವರು ಹೇಳಿದರು.

ವಿಧಾನಸಭಾ ಕ್ಷೇತ್ರವಾರು ವಿವರ: ಮತದಾರರ ಅಂತಿಮ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರದಲ್ಲಿ 103534 ಪುರುಷ, 104525 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 208062 ಮತದಾರರು ಇದ್ದಾರೆ. ಭದ್ರಾವತಿ ಕ್ಷೇತ್ರದಲ್ಲಿ 101058 ಪುರುಷ, 106546 ಮಹಿಳಾ, ಐವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 106546 ಮತದಾರರು ಇದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ 123770 ಪುರುಷ, 129204 ಮಹಿಳಾ, 15 ತೃತೀಯ ಲಿಂಗಿ ಸೇರಿದಂತೆ 252989 ಮತದಾರರು ಇದ್ದಾರೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ 91376 ಪುರುಷ, 93475 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ 184854 ಮತದಾರರು ಇದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ 98281 ಪುರುಷ, 97086 ಮಹಿಳಾ, ನಾಲ್ವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 195371 ಮತದಾರರು ಇದ್ದಾರೆ. ಸೊರಬ ಕ್ಷೇತ್ರದಲ್ಲಿ 97070 ಪುರುಷ, 101326 ಮಹಿಳಾ, ಇಬ್ಬರು ತೃತೀಯ ಲಿಂಗಿ ಸೇರಿದಂತೆ ಒಟ್ಟು 192220 ಮತದಾರರು ಇದ್ದಾರೆ. ಸಾಗರ ಕ್ಷೇತ್ರದಲ್ಲಿ 99401 ಪುರುಷ, 101326 ಮಹಿಳಾ, ಒಂದು ತೃತೀಯ ಲಿಂಗಿ ಸೇರಿದಂತೆ ಒಟ್ಟು 200728 ಮತದಾರರು ಇದ್ದಾರೆ. ಲಿಂಗಾನುಪಾತ ಅತಿ ಹೆಚ್ಚು ಭದ್ರಾವತಿ ಕ್ಷೇತ್ರದಲ್ಲಿ 1054 ಇದ್ದು, ಅತಿ ಕಡಿಮೆ ಸೊರಬ ಕ್ಷೇತ್ರದಲ್ಲಿ 980 ಇದೆ ಎಂದರು.
ಕಳೆದ ನವೆಂಬರ್ 9ರಂದು ಪ್ರಕಟಿಸಲಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 14,34,138 ಮತದಾರರ ಹೆಸರು ಪ್ರಕಟಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ 40767 ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದ್ದು, 33072 ಮತದಾರರ ಹೆಸರು ಕೈ ಬಿಡಲಾಗಿದೆ. 11651 ತಿದ್ದುಪಡಿ ಮಾಡಲಾಗಿದೆ. ತೆಗೆದು ಹಾಕಿರುವುದಕ್ಕೆ 11873 ಮರಣ, 17064 ಸ್ಥಳಾಂತರ, 1058 ಪುನರಾವರ್ತನೆ ಮತ್ತು 3077 ವಲಸೆ ಕಾರಣವಾಗಿದೆ. ಕರಡು ಪಟ್ಟಿಯಲ್ಲಿ ಲಿಂಗಾನುಪಾತ 1ಸಾವಿರ ಪುರುಷ ಮತದಾರರಿಗೆ 1014 ಮಹಿಳಾ ಮತದಾರರು ಇದ್ದರು ಎಂದು ಅವರು ಮಾಹಿತಿ ನೀಡಿದರು.

ಸೇರ್ಪಡೆಗೆ ಅವಕಾಶ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂಬAಧದಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿಗೆ ಚುನಾವಣಾ ಆಯೋಗ ನಿಗದಿಪಡಿಸುವ ದಿನಾಂಕದವರೆಗೂ ಹೆಸರು ಸೇರಿಸಲು ಅವಕಾಶವಿರುತ್ತದೆ. ನಮೂನೆ -6 ಸೇರ್ಪಡೆ, ನಮೂನೆ-6ಎ ಅನಿವಾಸಿ ಭಾರತೀಯರು ಹೆಸರು ನೊಂದಾಯಿಸಿಕೊಳ್ಳಲು, 6-ಬಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು, ನಮೂನೆ-7 ತೆಗೆದು ಹಾಕಲು, ನಮೂನೆ-8ರಲ್ಲಿ ತಿದ್ದುಪಡಿ, ವರ್ಗಾವಣೆ, ಬದಲಿ ಎಪಿಕ್‌ಗೆ ಮನವಿ ಮತ್ತು ಅಂಗವೈಕಲ್ಯ ಹೊಂದಿರುವ ಮತದಾರರು ವಿವರ ದಾಖಲಿಸಲು ಅವಕಾಶವಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು https://ceo.karnataka.gov.in ನಲ್ಲಿ ಲಭ್ಯವಿದ್ದು, ಮತದಾರರು ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Previous Post

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಇತರ ಕೌಶಲ್ಯಗಳಲ್ಲೂ ಪರಿಣತಿ ಹೊಂದಬೇಕು: ಸಂಸದ ರಾಘವೇಂದ್ರ

Next Post

ಹಂಪಿ, ಮೈಸೂರು ಇನ್ನಷ್ಟು ಅಭಿವೃದ್ದಿಗೆ ಸ್ವದೇಶ್‌ ದರ್ಶನ್‌ ಯೋಜನೆ ಸಹಕಾರಿ: ಸಚಿವೆ ಶಶಿಕಲಾ ಜೊಲ್ಲೆ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

ಹಂಪಿ, ಮೈಸೂರು ಇನ್ನಷ್ಟು ಅಭಿವೃದ್ದಿಗೆ ಸ್ವದೇಶ್‌ ದರ್ಶನ್‌ ಯೋಜನೆ ಸಹಕಾರಿ: ಸಚಿವೆ ಶಶಿಕಲಾ ಜೊಲ್ಲೆ 

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

April 25, 2026
ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

April 25, 2026
ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

April 25, 2026
ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ

ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ

April 25, 2026
ಸನಾತನ ಸಂಸ್ಕೃತಿ, ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ ಕೊಡುಗೆ ಅನನ್ಯ: ಪಂಡಿತ ಹೇಮಂತ ಆಚಾರ್ಯ ಗುಡಿ

ಸನಾತನ ಸಂಸ್ಕೃತಿ, ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ ಕೊಡುಗೆ ಅನನ್ಯ: ಪಂಡಿತ ಹೇಮಂತ ಆಚಾರ್ಯ ಗುಡಿ

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL