ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, CM Basavaraja Bommai ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ Minister Dr. Narayanagowda ಅವರು ಬಿಡುಗಡೆಗೊಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಲೋಗೋ, ಮಸ್ಕಟ್‌ನ್ನು ಬಿಡುಗಡೆಗೊಳಿಸಲಾಯಿತು. ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ವರ್ಚುವಲ್ ಮೂಲಕ ಭಾಗಿಯಾಗಿದ್ದರು.
ಲೋಗೋ ಬಿಡುಗಡೆ ಬಳಿಕ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಸ್ಟೀರಿಂಗ್ ಕಮಿಟಿ ಸಭೆ ನಡೆಸಲಾಯಿತು. ರಾಷ್ಟ್ರೀಯ ಯುವ ಜನೋತ್ಸವ ಯಶಸ್ವಿಗೊಳಿಸುವ ಸಂಬಂಧಿಸಿದಂತೆ ಉದ್ಘಾಟನೆ, ಸಿದ್ದತೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.
Also read: ಆಟೋಗೆ ಕಾರು ಡಿಕ್ಕಿ: ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು
ಜನವರಿ 12-16 ರವರೆಗೂ ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post