ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಎನ್‌ಎಮ್‌ಎಮ್‌ಎಸ್ ಪರೀಕ್ಷೆಯು ಅತ್ಯಂತ ಮಹತ್ವದಾಗಿದ್ದು ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸರ್ಕಾರ ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ವಿದ್ಯಾರ್ಥಿ ವೇತನವನ್ನು ನಾಲ್ಕು ವರ್ಷಗಳ ಕಾಲ ನೀಡುತ್ತದೆ. ಆದ್ದರಿಂದ ಅತಿ ಹೆಚ್ಚು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ವೈ. ಎಮ್. ಧರ್ಮಪ್ಪ ತಿಳಿಸಿದರು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಭದ್ರಾವತಿ ತಾಲ್ಲೂಕು ಘಟಕ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಭದ್ರಾವತಿ ಇವರ ವತಿಯಿಂದ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ಒಂದು ದಿನದ ಎನ್‌ಎಮ್‌ಎಮ್‌ಎಸ್ ಪರೀಕ್ಷಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಕೆ. ನಾಗೇಂದ್ರಪ್ಪ ಮಾತನಾಡಿ, ನವಿರು ನುರಿತ ಹಾಗೂ ಅನುಭವಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ಈ ತರಬೇತಿ ಆಯೋಜಿಸಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಸಾಗಲು ಕರೆ ನೀಡಿದರು.
ತರಬೇತಿ ಶಿಬಿರಕ್ಕೆ ಸಹಕಾರ ನೀಡಿರುವ ಭದ್ರಾವತಿ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳಿಗೆ ಧನ್ಯವಾದ ಹೇಳಿದರು
ಭದ್ರಾವತಿ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಬಸವರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ಮೂಲಕ ಭದ್ರಾವತಿ ತಾಲ್ಲೂಕಿನ ಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಸಾಗಲು ಕರೆ ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ದಿವಾಕರ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸಂಘದ ವತಿಯಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಅನುಕೂಲವಾಗುವಂತ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲಾ ಡಯಟ್ ಪ್ರಾಚಾರ್ಯ ಬಸವರಾಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಪಂಚಾಕ್ಷರಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಜಿ.ಹೆಚ್. ಪ್ರಭು, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ನಾಗರಾಜ, ಸಹ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ನಾಗರಾಜಪ್ಪ, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಂ.ಜಿ. ನವೀನ್ ಕುಮಾರ್, ಸಿ.ಡಿ. ಮಂಜುನಾಥ, ರಾಜು, ಶ್ರೀನಿವಾಸ, ನಾಗರಾಜ, ರವಿನಾಯ್ಕ, ಸುರೇಶ್ ಶಕುಂತಲ ಮುಂತಾದ ಪದಾಧಿಕಾರಿಗಳು ಹಾಜರಿದ್ದರು.
ಭದ್ರಾವತಿ ನಗರದ ವಿವಿಧ ಪ್ರೌಡಶಾಲೆಗಳ 375ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿ ಪ್ರಯೋಜನ ಪಡೆದುಕೊಂಡರು. ಸಂಪನ್ಮೂಲ ವ್ಯಕ್ತಿಗಳಾಗಿ ದಯಾನಂದ, ಸತೀಶ್, ಲೀಲಾವತಿ ಮುಂತಾದವರು ತರಬೇತಿ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post