ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜ.12 ರಂದು ಬೆಳಿಗ್ಗೆ 10 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ. ನಾರಾಯಣಗೌಡ Minister Narayana Gowda ಇವರು ನೆರವೇರಿಸುವರು. ಗೃಹ ಸಚಿವ ಆರಗ ಜ್ಞಾನೇಂದ್ರ, Home Minister Araga Gnanendra ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಇವರ ಘನ ಉಪಸ್ಥಿತಿ ಇರಲಿದೆ.
Also read: ಅಯ್ಯೋ ವಿಧಿಯೇ! ಹೃದಯಾಘಾತದಿಂದ ಸೊರಬದ 10ನೆಯ ತರಗತಿ ವಿದ್ಯಾರ್ಥಿ ದುರ್ಮರಣ
ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post