No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ: ಡಿ.ಕೆ. ಶಿವಕುಮಾರ್ ಘೋಷಣೆ

kalpa News by kalpa News
January 11, 2023
in ಬೆಳಗಾವಿ
0
ಯಡಿಯೂರಪ್ಪ ಕಥೆ ಗೋವಿಂದಾ ಗೋವಿಂದ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಚಿಕ್ಕೋಡಿ |

ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ ಎಂದರು.

ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ. ನಾಂದಿ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ, ಪ್ರತಿಜ್ಞೆ ಮಾಡುತ್ತಿರುವ ಗಳಿಗೆ ಎಂದರು.

ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ ಎಂದರು.

ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದು. ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ನಡೆಯುತ್ತೇವೆ. ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದರು.
ಅಡುಗೆ ಅನಿಲದ ಬೆಲೆ 400 ರಿಂದ 1100 ರು. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾರಾದರೂ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧಾನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು ಎಂದು ತಿಳಿಸಿದರು.

ರೈತರ ಬದುಕು ಯಶಸ್ವಿಯಾಗಬೇಕು ಎಂದು ಕಾಂಗ್ರೆಸ್ ನುಡಿದಂತೆ ನಡೆದಿದೆ. ಬಿಜೆಪಿ ಕಳೆದ ಮೂರುವರೆ ವರ್ಷಗಳಲ್ಲಿ ನುಡಿದಂತೆ ನಡೆಯಲಿಲ್ಲ. ಬದಲಿಗೆ ಬಿಜೆಪಿಯವರು ನಿಮ್ಮ ಬದುಕಿನಲ್ಲಿ ಚೆಲ್ಲಾಟವಾಡುತ್ತಾ ಬಂದರು. ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರ ಹಿಡಿದರು. ಈ ಸರ್ಕಾರದಲ್ಲಿ ಕೊಟ್ಟ ಮಾತು ಈಡೇರಿಸಿದರಾ? ನಿಮ್ಮ ಬದುಕಿನಲ್ಲಿ ಬೆಳಕು ಕೊಟ್ಟರಾ? ಹೀಗಾಗಿ ನಾವು ಬಿಜೆಪಿ ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯ ಲಂಚಾವತಾರ, ಮಂಚಾವತಾರ ಬಿಡುಗಡೆ ಮಾಡಿದ್ದೇವೆ ಎಂದರು.

ಈ ಸರ್ಕಾರ ಬಿ ರಿಪೋರ್ಟ್ ಸರ್ಕಾರ. ಮಂತ್ರಿಗಳು ಯಾವುದೇ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಅವರಿಗೆ ಬಿ ರಿಪೋರ್ಟ್ ಕೊಟ್ಟು, ಅವರು ಯಾವುದೇ ತಪ್ಪು ಕೆಲಸ ಮಾಡಿಲ್ಲ, ನಿರ್ದೇಷಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಸಂದೇಶ ನೀಡುತ್ತಾರೆ. ಈ ಸರ್ಕಾರ ಬೇಕಾ ಎಂದು ನೀವು ಆಲೋಚಿಸಿ ಎಂದರು.
ಈ 40% ಕಮಿಷನ್ ಸರ್ಕಾರ ಈ ರಾಜ್ಯದಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆ. ಈ ಸರ್ಕಾರ ಹೊಟೇಲಿನಲ್ಲಿ ಮೆನು ಕಾರ್ಡ್ ಮಾದರಿಯಲ್ಲಿ ಭ್ರಷ್ಟಾಚಾರದ ರೇಟ್ ಕಾರ್ಡ್ ಹಾಕಿದ್ದಾರೆ. ಇದನ್ನು ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ, ಮಂತ್ರಿ ಹುದ್ದೆಗೆ 100 ಕೋಟಿ, ಆಯುಕ್ತರಿಗೆ 15 ಕೋಟಿ, ಕೋವಿಡ್ ಪೂರೈಕೆಗೆ ಶೇ.75, ಪಿಡಬ್ಲ್ಯೂ ಕಾಮಗಾರಿಗೆ 40%, ಮಠಗಳ ಅನುದಾನಕ್ಕೆ 40%, ಮೊಟ್ಟೆ ಪೂರೈಕೆಗೆ 30% ಕಮಿಷನ್ ನಿಗದಿ ಮಾಡಿದ್ದಾರೆ. ಈ ಬಗ್ಗೆ 2 ಲಕ್ಷ ಸದಸ್ಯರಿರುವ ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದು ನಿಜವಲ್ಲವೇ? ಆದರೂ ಸರ್ಕಾರ ದುಡ್ಡು ಕೊಡಲು ನಿರಾಕರಿಸಿದ್ದು ನಿಜವಲ್ಲವೇ? ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದೆವು. ಈವರೆಗೂ ಆ ಕುಟುಂಬಕ್ಕೆ ಸರ್ಕಾರ ಬಿಲ್ ಪಾವತಿ ಮಾಡಿಲ್ಲ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿಯ ಪಾಪದ ಕೊಡ ತುಂಬಿದೆ. ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೊಸ ವಚನಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಫೆಬ್ರವರಿ 17ರಂದು ಬಜೆಟ್ ಮಂಡಿಸಿ ಆಗ ಇನ್ನಷ್ಟು ಆಶ್ವಾಸನೆ ನೀಡಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಜನರಿಗೆ ಕೊಡುಗೆ ನೀಡಲು ಆಗಿಲ್ಲ. ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ ಎಂದರು.
ಬಸವಣ್ಣ, ಕುವೆಂಪು, ಕನಕದಾಸ, ಶಿಶುನಾಳ ಷರೀಫರ ಕರ್ನಾಟಕ ನಿರ್ಮಾಣವಾಗಬೇಕು. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಇದನ್ನು ಗಮನದಲ್ಲಿಟ್ಟುಕೊಂಡು ಆಶೀರ್ವಾದ ಮಾಡಬೇಕು. ನಿಮಗಾಗಿ ನಾವು ಕೆಲವು ಸಂಕಲ್ಪ ಮಾಡಿದ್ದೇವೆ. ಅದರ ಪೈಕಿ ಮೊದಲನೇ ಗ್ಯಾರೆಂಟಿ ಘೋಷಣೆಯನ್ನು ಪ್ರಕಟಿಸಿದ್ದೇವೆ. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಅಭಿವೃದ್ಧಿ ಕರ್ನಾಟಕ ನಿರ್ಮಾಣಕ್ಕೆ, ರಾಜ್ಯದ ಕಳಂಕ ತೊಳೆಯಲು ನೀವೆಲ್ಲರೂ ನಮಗೆ ಸಹಕಾರ ನೀಡಬೇಕು ಎಂದರು.

ಈ ತಿಂಗಳು 16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ರಾಜ್ಯದ ನಾಯಕಿಯರನ್ನು ಭೇಟಿ ಮಾಡುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ, ಆಸ್ತಿ ಎಂದು ನಾ ನಾಯಕಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರತಿ ಪಂಚಾಯ್ತಿಯಿಂದಲೂ ಮಹಳೆಯರು ಸಮಾವಶದಲ್ಲಿ ಭಾಗವಹಿಸಬೇಕು. ನಾವು ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲು ಪ್ರಿಯಾಂಕ ಗಾಂಧಿ ಅವರು ಸೂಚಿಸಿದ್ದಾರೆ. ನೀವು ಅವರ ಕಾರ್ಯಕ್ರಮಕ್ಕೆ ಬಂದು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviChikkodiD K ShivakumarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಿಕ್ಕೋಡಿಡಿ.ಕೆ. ಶಿವಕುಮಾರ್ಬೆಳಗಾವಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಜಿ ಸಚಿವ ಕೃಷ್ಣಭೈರೇಗೌಡ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

Next Post

ಏಟು ಬಿದ್ದಾಗ ಸಮಯಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಿ: ಎಂ.ಎಸ್ . ಮಠಪತಿ ಮಾಹಿತಿ

kalpa News

kalpa News

Next Post
ಏಟು ಬಿದ್ದಾಗ ಸಮಯಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಿ: ಎಂ.ಎಸ್ . ಮಠಪತಿ ಮಾಹಿತಿ

ಏಟು ಬಿದ್ದಾಗ ಸಮಯಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಿ: ಎಂ.ಎಸ್ . ಮಠಪತಿ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL