ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಸ್ವಾಮಿ ವಿವೇಕಾನಂದರ ಜೀವನ ಮತ್ತು ಕಾರ್ಯ ಹಲವಾರು ವರ್ಷಗಳಿಂದ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ. ಎಂದು ಕತವಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಪಿ. ಗಣೇಶ್ ನಾಯಕ್ ಹೇಳಿದರು,
ಚಂದ್ರಗುತ್ತಿ ಸಮೀಪದ ಕತವಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಅಂತರಾಷ್ಟ್ರೀಯ ಯುವಕರ ಜಯಂತಿಯನ್ನು ಆಚರಿಸಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು 1993ರಲ್ಲಿ ವಿಶ್ವ ಧರ್ಮ ಸಮ್ಮೇಳನದಲ್ಲಿ ಭಾರತ ಮತ್ತು ಹಿಂದೂ ಧರ್ಮವನ್ನು ಪ್ರತಿನಿಧಿಸಿದ್ದರು. 1985ರಿಂದ ಭಾರತ ಸರ್ಕಾರವು ವಿವೇಕಾನಂದರ ವಿಚಾರಧಾರೆಗಳು ವಿಶೇಷವಾಗಿ ಯುವಕರನ್ನು ಪ್ರೇರೇಪಿಸುತ್ತದೆ ಮತ್ತು ಅವರ ಜೀವನವನ್ನು ರೂಪಿಸಲು ಸಹಾಯ ಮಾಡುತ್ತದೆ ಎಂದು ಹೇಳಿ ರಾಷ್ಟ್ರೀಯ ಯುವ ದಿನ ಆಚರಿಸಲು ಪ್ರಾರಂಭಿಸಿತು ಎಂದು ತಿಳಿಸಿದರು.
ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗುತ್ತಿರುವ ಹಾಗೂ ಫೇಸ್ಬುಕ್ ವಾಟ್ಸಾಪ್ ಇಂಟರ್ನೆಟ್ ಗಳ ದುರ್ಬಳಕೆಯಿಂದ ನೈತಿಕ ಮೌಲ್ಯ ಕುಸಿಯುತ್ತಿರುವ ಈ ದಿನಗಳಲ್ಲಿ ಸ್ವಾಮಿ ವಿವೇಕಾನಂದರ ಜೀವನ ಮೌಲ್ಯಗಳು ಯುವಜನತೆಗೆ ದಾರಿದೀಪವಾಗಿದೆ ಎಂದರು
ಶಿಕ್ಷಕರಾದ ಲೋಕೇಶಪ್ಪ ಎಸ್, ರೂಹೀನಾ, ಸೇರಿದಂತೆ ಶಾಲೆಯ ಮಕ್ಕಳು ಉಪಸ್ಥಿತರಿದ್ದರು,
ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















