ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಬಿಎಚ್ ರಸ್ತೆಯಲ್ಲಿರುವ ಹೆರಿಟೇಜ್ ಲಾಡ್ಜ್’ನಲ್ಲಿ ವ್ಯಕ್ತಿಯೊಬ್ಬರ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹಾಸನ ಮೂಲದ ಪರ್ವೇಜ್ ಖಾನ್ ಎಂಬಾತನ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ವರದಿಯಾಗಿದೆ.
ಹಾಸನದ ಚನ್ನರಾಯಪಟ್ಟಣದ ಮೂಲದ ಆಯೇಶಾ ಎಂಬಾಕೆ ಮತ್ತು ಪರ್ವೇಜ್ ಖಾನ್ ಎಂಬ ಜಾವಗಲ್ ಮೂಲದ ಇಬ್ಬರು ಕಳೆದ ಮೂರುನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ.

ರೂಂನಲ್ಲಿ ಆಯೇಶಾ ಹಾಗೂ ಪರ್ವೇಜ್ ನಡುವೆ ಜಗಳವಾಗಿದೆ ಎನ್ನಲಾಗಿದ್ದು, ಈ ವೇಳೆ ಪರ್ವೇಜ್ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಬಳಿಕ ರೂಮಿನಿಂದ ಆಯೇಶಾ ವಾಪಸ್ ತೆರಳಿ, ಹಾಸನ ಪೊಲೀಸರ ಬಳಿ ಹಾಜರಾಗಿದ್ದಾಳೆ. ಸದ್ಯ ಅಲ್ಲಿಂದ ಮಾಹಿತಿ ಪಡೆದಿರುವ ಹಳೇನಗರ ಠಾಣೆಯ ಪೊಲೀಸರು, ಆಯೇಶಾಳನ್ನು ಕರೆತಂದು, ಸ್ಥಳ ಮಹಜರ್ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post