ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂಆರ್’ಎಸ್ ವೃತ್ತದ ಬಳಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಖಾಸಗಿ ರೆಸಾರ್ಟ್’ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಜಿತ್(27) ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಲಾರಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಲಾರಿ ಭದ್ರಾವತಿ ಕಡೆಯಿಂದ ಶಿವಮೊಗ್ಗದ ಕಡೆ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















