ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೊರಾರ್ಜಿ ದೇಸಾಯಿ ವಿದ್ಯಾರ್ಥಿ ನಿಲಯ ಹಾಗೂ ಬಾಪೂಜಿ ನಗರದ ಬಾಲಕಿಯರ ವಸತಿನಿಲಯದ ಒಟ್ಟು 108 ಮಕ್ಕಳು ವಾಂತಿ ಭೇದಿಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ಮಾತನಾಡಿದ ಅವರು, ವಿಷಯುಕ್ತ ಆಹಾರ ಪದಾರ್ಥ ಸೇವನೆಯಿಂದಾಗಿ ಮಕ್ಕಳು ಅಸ್ವಸ್ಥರಾಗಿರುವುದಾಗಿ ತಿಳಿದುಬಂದಿದೆ. ಈಗಾಗಲೇ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, 24 ಗಂಟೆಗಳವರೆಗೆ ಅವರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಸದ್ಯಕ್ಕೆ ಯಾವುದೇ ಅಪಾಯವಿಲ್ಲ ಹಾಗೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್ ಮೆಗಾನ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಆಹಾರದ ವ್ಯತ್ಯಸದಿಂದಾಗಿ ಮಕ್ಕಳಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















