ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಬೈಕ್ ಹಾಗೂ ಬಿಜೆಪಿ ಪ್ರಚಾರದ ವಾಹನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ.
ಗುರುವಾಯನಕೆರೆ ಮೂಲದ ವಿಜಿತ್ (35) ಮೃತಪಟ್ಟವರು ಎಂದು ಎಂದು ಗುರುತಿಸಲಾಗಿದ್ದು, ಬಂಟ್ವಾಳ ಶಾಸಕರ ನೇತೃತ್ವದ ಗ್ರಾಮ ವಿಕಾಸ ಯಾತ್ರೆಯ ಪ್ರಚಾರದ ವಾಹನ ಬೈಕ್’ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಕೆಲ ಕಾಲ ಸಂಚಾರಕ್ಕೆ ತೊಡಕು ಉಂಟಾಯಿತು ಎಂದು ತಿಳಿದು ಬಂದಿದೆ.
Also read: ಯೋಗಥಾನ್: ಗಿನ್ನಿಸ್ ದಾಖಲೆ ಸೃಷ್ಟಿಸಿದ ಆಳ್ವಾಸ್ ವಿದ್ಯಾರ್ಥಿಗಳು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















