ಕಲ್ಪ ಮೀಡಿಯಾ ಹೌಸ್ | ಉಡುಪಿ |
ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದ್ರಾಳಿ ರೈಲ್ವೆ ಬ್ರಿಜ್ ಬಳಿ ನಡೆದಿದೆ.
ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ.
ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಮಣಿಪಾಲ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕಾನೂನು ಪ್ರಕ್ರಿಯೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















