ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರೋಗಗ್ರಸ್ತ ಕಾರ್ಖಾನೆ ಎಂಬ ಹಣೆಪಟ್ಟಿಯೊಂದಿಗೆ ವಿಐಎಸ್‌ಎಲ್ VISL ಅನ್ನು ಮುಚ್ಚುವ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸರ್ಕಾರದ ವಿರುದ್ಧ ಉಕ್ಕಿನ ನಗರಿಯ ಜನ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.
ವಿಐಎಸ್‌ಎಲ್ ಕಾರ್ಮಿಕ ಸಂಘಟನೆಗಳು ಹಾಗೂ ಇನ್ನಿತರ ಸಂಘಟನೆಗಳ ನೇತೃತ್ವದಲ್ಲಿ ಇಂದು ಸಂಜೆ ಕಾರ್ಖಾನೆ ಮುಂಭಾಗದಿಂದ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.
ಸಾವಿರಾರು ಮಂದಿ ಸ್ವಯಂ ಪ್ರೇರಿತರಾಗಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದು, ಕಾರ್ಖಾನೆ ಮುಚ್ಚುವ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ರ್‍ಯಾಲಿ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಸಾರ್ವಜನಿಕರು ಕಾರ್ಖಾನೆಯನ್ನು ಮುಚ್ಚುವ ನಿರ್ಧಾರದ ಮೂಲಕ ನಗರದ ಜನತೆಗೆ ಸರ್ಕಾರ ವಂಚಿಸಿದೆ ಎಂದು ಕಿಡಿ ಕಾರಿದರು.
ವಿಐಎಸ್‌ಎಲ್ ಕಾರ್ಖಾನೆ, ಅಂಡರ್‌ಬ್ರಿಡ್ಜ್, ಬಿಹೆಚ್. ರಸ್ತೆ, ಚನ್ನಗಿರಿ ರಸ್ತೆಯಲ್ಲಿ ಸಾಗಿದ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















