ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗಳಿಸುವ ಮೂಲಕ ಸ್ವಂತ ಬಲದ ಮೇಲೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರುಗಳ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಉತ್ತಮ ಕೆಲಸವನ್ನು ಮಾಡಿದೆ. ಈಗಾಗಲೇ ಪಕ್ಷದ ವಿಜಯಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಅದು ಯಶಸ್ವಿಯಾಗಿ ನಡೆಯುತ್ತಿದೆ. ಕೇಂದ್ರದ ನಾಯಕರು ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದು, ಸ್ವಂತ ಬಲದ ಮೇಲೆ ಸರ್ಕಾರ ರಚಿಸಲು ತೀರ್ಮಾನಿಸಲಾಗಿದೆ. ಇದರಂತೆಯೇ ನಾವು ಕೆಲಸ ಮಾಡುತ್ತಿದ್ದು, 140ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















