ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಶಿವಮೊಗ್ಗ |
ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಬೃಹತ್ ಪ್ರಮಾಣದ ಅನುದಾನವನ್ನು ಮೀಸಲಿಡುವ ಮೂಲಕ ಈ ಭಾಗದ ಜನತೆಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ.
ತಮ್ಮ ಬಜೆಟ್ ಭಾಷಣದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವಾಕಾಂಕ್ಷೆಯ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದ್ದು, ಯೋಜನೆಯ ಜಾರಿಗೆ ಕೇಂದ್ರ ಎಲ್ಲಾ ರೀತಿಯ ನೆರವನ್ನು ನೀಡಲಿದೆ ಎಂದಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಕಾಲಮಾನವನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಈ ಹಿಂದೆ ಕೇಂದ್ರಕ್ಕೆ ಮನವಿ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















