ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಂಚಾರ ನಿಯಮ ಉಲ್ಲಂಘಿಸಿ, ದಂಡದ ಮೊತ್ತವನ್ನು ಕಟ್ಟದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸರಕಾರವು ಭರ್ಜರಿ ರಿಯಾಯಿತಿ ಘೋಷಿಸಿದೆ. ಶೇ.50ರ ತನಕ ರಿಯಾಯಿತಿ ನೀಡುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಸಂಚಾರ ನಿಯಮ ಉಲ್ಲಂಘಿಸಿ ದಂಡದ ಮೊತ್ತ ಬಾಕಿ ಉಳಿಸಿಕೊಂಡಿರುವವರು ಫೆ.11ರೊಳಗೆ ಟ್ರಾಫಿಕ್ ಫೈನ್ ಕಟ್ಟಿದರೆ ಮಾತ್ರ ಈ ಆದೇಶವು ಅನ್ವಯವಾಗಲಿದೆ. ಇದು ಸೀಮಿತ ಅವಧಿಯಲ್ಲಿ ನಡೆಯಲಿದ್ದು, ಈ ಮೂಲಕ ನಿಗದಿತ ದಿನಾಂಕದೊಳಗೆ, ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿ ದಂಡವನ್ನು ಪಾವತಿ ಮಾಡದೇ ತಪ್ಪಿಸಿಕೊಂಡು ಓಡಾಡುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಕಳೆದ ಜ.27ರಂದು, ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೈಕೋರ್ಟ್ ನ್ಯಾಯಮೂರ್ತಿ ಬಿ. ವೀರಪ್ಪ ಅವರು, 1300 ಕೋಟಿ ರೂ ಗೂ ಅಧಿಕ ದಂಡದ ಮೊತ್ತ ಬಾಕಿ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಇದರಿಂದ ಜನರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮನವಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.
Also read: ಸೇವಾ ನಿವೃತ್ತಿ ಹಿನ್ನಲೆ ಪ್ರಾಧ್ಯಾಪಕ ಸದಾಶಿವ ಜೋಯಿಸ್ ಅವರಿಗೆ ಬೀಳ್ಕೊಡುಗೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post